ಬೆಂಗಳೂರು: ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಸಭೆ ಆರಂಭವಾಗಿದೆ. ಸಭೆಯಲ್ಲಿ ಕಂದಾಯ ಸಚಿವರಾದ ಆರ್ ಅಶೋಕ್ ಭಾಗಿ, ನಾರಾಯಣ ಗೌಡ, ಎಂಟಿಬಿ , ಕೋಟಾ ಶ್ರೀನಿವಾಸ್ ಪೂಜಾರಿ, ಗೋವಿಂದ ಕಾರಜೋಳ ಭಾಗಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಡಿಸಿಗಳ ಜೊತೆ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ. ಸಭೆಯಲ್ಲಿ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಸಿಇಓಗಳ ಜವಾಬ್ದಾರಿ ಬಗ್ಗೆ ಚರ್ಚೆ ನಡೆಸಲಾಗಿದ್ದು,
ಅಲ್ಲದೇ ಈಗಾಗಲೇ ಸಿಇಓಗಳಿಗೆ ಫಾರ್ಮೆಟ್ ಕೊಡಲಾಗಿದೆ ಎಂದು ತಿಳಿಸಿದರು. ಇನ್ನೂ ಸಭೆಯಲ್ಲಿ 2 ವರ್ಷ ಎಷ್ಟು ಟಾರ್ಗೆಟ್ ಮುಟ್ಟಿದ್ದೇವೆ, ಹಾಗೂ ಸಿಇಓ ವ್ಯಾಪ್ತಿಗೆ ಬರುವಂತ ಅಡ್ಮಿನಿಸ್ಟ್ರೇಶನ್ ಮತ್ತು ಡೆವಲಪ್ಮೆಂಟ್ ಬಗ್ಗೆ ಚರ್ಚೆ ನಡೆಸಿದರು. ಪ್ರತ್ಯೇಕವಾಗಿ ಅಭಿವೃದ್ಧಿ ಸಂಬಂಧಪಟ್ಟಂತೆ ಸಭೆಯಲ್ಲಿ ಸೂಚನೆ ನೀಡಿದರು. ಹಾಗೆ ಯಾವ ಯಾವ ಯೋಜನೆಯಲ್ಲಿ ಎಷ್ಟೆಷ್ಟು ಸಾಧನೆಯಾಗಿದೆ. ನಿಖರತೆ ಅಧಾರದ ಮೇಲೆ ರಿವ್ಯೂ ಆಗಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
