ಬೆಂಗಳೂರು: ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಬೂಸ್ಟರ್ ಡೋಸ್ ಲಸಿಕೆ ವಿತರಣೆಗೆ ಕಾರ್ಯಕ್ರಮ ನಡೆಯಿತು. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಕೆ. ಸುಧಾಕರ್ ಸೇರಿ ಹಲವರು ಭಾಗವಹಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು ಎರಡನೇ ಡೋಸ್ ಪಡೆದು ಒಂಬತ್ತು ತಿಂಗಳು ಪೂರೈಸಿದ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಅನಾರೋಗ್ಯ ಹೊಂದಿರುವ 60 ವರ್ಷಗಳ ಮೇಲ್ಪಟ್ಟವರಿಗೆ ಲಸಿಕೆ ವಿತರಿಸಲಾಗುತ್ತದೆ ಎಂದು ತಿಳಿಸಿದರು. ಇನ್ನು ರಾಜ್ಯದಲ್ಲಿ ಜ.16ರಿಂದ ಲಸಿಕೆ ವಿತರಿಸಲಾಗುತ್ತಿದ್ದು, 18 ವರ್ಷ ಮೇಲ್ಪಟ್ಟ 4.89 ಕೋಟಿ ಮಂದಿಗೆ ಲಸಿಕೆ ವಿತರಿಸುವ ಗುರಿಯನ್ನು ವಿತರಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ಜ.3 ರಿಂದ 15 ರಿಂದ 18ವರ್ಷದವರಿಗೆ ಲಸಿಕೆ ವಿತರಣೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ ಎಂದು ತಿಳಿಸಿದರು.
