ನೆಲಮಂಗಲ: ಮುಡಾ ಹಗರಣದಲ್ಲಿ ಸಿಎಂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅನಿವಾರ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.ಸೋಂಪುರ ಹೋಬಳಿಯ ಸಮಾಧಾನ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಡಾ ಹಗರಣ, ವಾಲ್ಮೀಕಿ ಹಗರಣದಿಂದ ರಾಜ್ಯದ ಜನತೆಗೆ ಅನ್ಯಾಯವಾಗಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅನಿವಾರ್ಯತೆ ಬಂದಾಗಿದೆ.
Post Office Scheme: ಅಂಚೆ ಕಚೇರಿಯ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ 10 ವರ್ಷದಲ್ಲಿ ನಿಮ್ಮ ಹಣ ಡಬಲ್!
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮೈಸೂರಿಗೆ ಮೊದಲನೇ ಪಾದಯಾತ್ರೆ ಯಶಸ್ವಿಯಾಗಿದೆ. ಸದ್ಯ ಎರಡನೇ ಪಾದಯಾತ್ರೆ ಬಗ್ಗೆ ಚರ್ಚೆಯಾಗಿಲ್ಲ ಎಂದು ತಿಳಿಸಿದರುಈ ಎರಡು ಹಗರಣಗಳು ಸಿಬಿಐಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ವರಿಷ್ಠ ಮಲ್ಲಿಕಾರ್ಜುನ ಖರ್ಗೆಯವರೇ ಈ ಹಗರಣದ ಬಗ್ಗೆ ಮಾತಾಡಿದ್ದಾರೆ. ಸಿಎಂ ಸಿದ್ದರಾಮಯ್ಯರ ರಾಜೀನಾಮೆ ಅನಿವಾರ್ಯವಾಗಿದೆ ಎಂದರು.