ಬೆಂಗಳೂರು: ಒಣ ಮರ ಏಕೆ ಬಿಟ್ಕೊಂಡಿದ್ದೀರಿ.? ಅನಾಹುತ ಆಗ್ಲಿ ಅಂತನಾ? ಎಂಬುದಾಗಿ ಬೆಂಗಳೂರು ಸಿಟಿ ರೌಂಡ್ಸ್ ವೇಳೆಯಲ್ಲಿ ಅಧಿಕಾರಿಗಳನ್ನು ಸಿಎಂ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಬೆಂಗಳೂರಿನ ಸೌಂದರ್ಯಕ್ಕೆ ಹೆಚ್ಚು ಆದ್ಯತೆ ನೀಡುವಂತೆ ಸೂಚಿಸಿದರು. ಇದರ ಬಗ್ಗೆ ಇಲ್ಲಿದೆ ಕಂಪ್ಲೀಟ್ ಮಾಹಿತಿ.. ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರು ಸಿಟಿ ರೌಂಡ್ಸ್ ನಡೆಸುತ್ತಿದ್ದಾರೆ.
ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್, ಜಯನಗರ ಹಾಗೂ ಬಿಟಿಎಂ ನಿಂದ ಬನಶಂಕರಿ ಹೋಗುವ ಮಾರ್ಗದಲ್ಲಿ ಸಂಚಾರ ದಟ್ಟನೆಯಿಂದ ನಿತ್ಯ ಉದ್ಯೋಗ ಹಾಗೂ ಇನ್ನಿತರ ಕಾರಣಗಳಿಗಾಗಿ ಈ ರಸ್ತೆಯಲ್ಲಿ ತೆರಳುವ ಸಾವಿರಾರು ವಾಹನ ಸವಾರರಿಗೆ ಅನಾನುಕೂಲ ಆಗುತ್ತಿತ್ತು.
ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರದ ಬಿಟಿಎಂ ಮೆಟ್ರೋಸ್ಟೇಷನ್ಗೆ ಭೇಟಿ ನೀಡಿ ಮೇಲುಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್ ಡೆಕ್ಕರ್ – 2 ಟೈರ್ ವ್ಯವಸ್ಥೆಯನ್ನು ಪರಿಶೀಲಿಸುವ ಸಂದರ್ಭದಲ್ಲಿ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಇದೇ ಮಾದರಿಯ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದ್ದು,
Black radish: ಕಪ್ಪು ಮೂಲಂಗಿ ಬೆಳೆಯುವುದು ಹೇಗೆ..? ಇದರ ಉಪಯೋಗವೇನು..?
ವೇಗವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ. ಇದಲ್ಲದೆ, ಸುಗಮ ಸಂಚಾರಕ್ಕಾಗಿ ಬಿಟಿಎಂ ನಿಂದ ಬನಶಂಕರಿ ಕಡೆಗೆ ಹೋಗುವ ರಸ್ತೆಯಲ್ಲಿ ರಾಘವೇಂದ್ರಸ್ವಾಮಿ ದೇವಸ್ಥಾನ ಸರ್ಕಲ್, ಜಯನಗರ 5ನೇ ಬ್ಲಾಕ್ನಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಬೇಡಿಕೆ ಇದ್ದು, ಈ ಕಡೆಗಳಲ್ಲಿ ಅಂಡರ್ ಪಾಸ್ ನಿರ್ಮಿಸಲು ಸೂಚಿಸಿದ್ದಾರೆ.
ಒಣಗಿದಂತ ಮರಗಳನ್ನು ಕಂಡಂತ ಸಿಎಂ ಸಿದ್ಧರಾಮಯ್ಯ, ಇವುಗಳನ್ನು ಏಕೆ ಬಿಟ್ಟುಕೊಂಡಿದ್ದೀರಿ.? ಅನಾಹುತ ಆಗ್ಲಿ ಅಂತನ ಎಂಬುದಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ನಗರದಲ್ಲಿನ ಒಣ ಮರಗಳು, ಅಪಾಯಕಾರಿ ಮರಗಳನ್ನು ತೆರವುಗೊಳಿಸಿ. ಬೆಂಗಳೂರಿನ ಸೌಂದರ್ಯಕ್ಕೆ ಹೆಚ್ಚು ಆದ್ಯತೆ ನೀಡುವಂತೆ ಸೂಚಿಸಿದರು. ಅಲ್ಲದೇ ಪದ್ಮನಾಭನಗರದಲ್ಲಿನ ಪ್ಲೈಓವರ್ ಬಳಿಯ ಪುಟ್ ಪಾತ್ ಸರಿಪಡಿಸುವಂತೆ ಸೂಚಿಸಿದರು.
ಕಳೆದ ಆರು ವರ್ಷಗಳಿಂದ ನೆನೆಗುದಿಗೆ ಬಿದ್ದು ಸಾರ್ವಜನಿಕರಿಗೆ ವಿಪರೀತ ಕಿರಿಕಿರಿ ಆಗುತ್ತಿದೆ. 2.95 ಕಿ.ಮೀ. ಉದ್ದದ ಈಜಿಪುರ ಫ್ಲೈ ಓವರ್ ಕಾಮಗಾರಿ.ಈ ಕೆಲಸ ಪೂರ್ಣಗೊಳಿಸಲು ಪ್ರಸಕ್ತ ಸರ್ಕಾರ ಅಧಿಕಾರಕ್ಕೆ ಬಂದನಂತರ ದಿನಾಂಕ 20-11-2023 ರಂದು BSCPL ಎಂಬ ಕಂಪೆನಿಗೆ ಕಾರ್ಯಾದೇಶ ನೀಡಲಾಗಿತ್ತು. ಟೆಂಡರ್ ಷರತ್ತಿನ ಪ್ರಕಾರ 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕಾಗಿತ್ತು.
ಆದರೆ ಕಳೆದ ಆರು ತಿಂಗಳಲ್ಲಿ ಕೇವಲ ಶೇ. 4 ರಿಂದ 6 ರಷ್ಟು ಪ್ರಗತಿಯಾಗಿದೆ. ಈ ಮಾಹಿತಿ ತಿಳಿದ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಗುತ್ತಿಗೆದಾರರಿಗೆ ನಿಯಮಾನುಸಾರ ನೋಟಿಸ್ ನೀಡಿ, ಸ್ಪಂದಿಸದಿದ್ದರೆ ಕಾನೂನು ಪ್ರಕಾರ ಟೆಂಡರ್ ರದ್ದುಪಡಿಸಿ, ಬೇರೆಯವರಿಗೆ ಗುತ್ತಿಗೆ ನೀಡುವಂತೆ ಸೂಚಿಸಿದರು.