ಬೆಂಗಳೂರು: ವಿಧಾನ ಪರಿಷತ್ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಸಿಎಂ , ಡಿಸಿಎಂ ವಿರುದ್ಧ ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಬ್ಬರೇ ತೀರ್ಮಾನ ಮಾಡಿದರೆ ಸರಿಯಾಗುವುದಿಲ್ಲ. ಪಕ್ಷದ ಹಿರಿಯ ನಾಯಕರ ಸಲಹೆ, ಅಭಿಪ್ರಾಯಗಳನ್ನೂ ಕೇಳಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಾರು ಹಿರಿಯರು, ಅನುಭವಿ ನಾಯಕರು ಇದ್ದಾರೆ ಅವರ ಜೊತೆ ಚರ್ಚೆ ಒಳ್ಳೆಯದು. ಪಕ್ಷದಲ್ಲಿ ಅನೇಕ ವರ್ಷ ದುಡಿದ ನಾಯಕರ ಸಲಹೆ ಪಡೆಯಬೇಕು. ಜಾತಿವಾರು, ಪ್ರಾದೇಶಿಕವಾರು, ಪಕ್ಷಕ್ಕೆ ದುಡಿದವರಿಗೆ ಸ್ಥಾನ ಕೊಡಬೇಕು ಎಂದು ಹೇಳಿದರು.
ವಾಟ್ಸಾಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕೋದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ಅದು ಪಕ್ಷದ ತೀರ್ಮಾನವಾಗಿದ್ದು ಹೈಕಮಾಂಡ್ ಎಲ್ಲವನ್ನು ನೋಡಿಕೊಳ್ಳುತ್ತದೆ. ಅದನ್ನು ಶಿವಕುಮಾರ್ ಮಾಡುವುದಿಲ್ಲ. ಅವರೇ ಇರಲಿ ಅಂದ್ರೆ ಅವರೇ ಇರುತ್ತಾರೆ. ಬೇರೆಯವರು ಬರಲಿ ಅಂದರೆ ಬೇರೆಯವರು ಬರುತ್ತಾರೆ ಎಂದು ಮಾರ್ಮಿಕವಾಗಿ ಟಾಂಗ್ ಕೊಟ್ಟರು.