ಬೆಂಗಳೂರು:- ಸಚಿವ, ಬಿಜೆಪಿ ನಾಯಕ ಬಿ.ಶ್ರೀರಾಮುಲು ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ.
ಆಡಳಿತ ಪಕ್ಷ-ವಿರೋಧ ಪಕ್ಷದ ನಾಯಕರು ಒಂದೆಡೆ ಸೇರಿರುವ ಬಗ್ಗೆ ವ್ಯಾಪಕ ಚರ್ಚೆ ಆಗುತ್ತಿದೆ.
ಲೋಕಸಭಾ ಚುನಾವಣೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮವಾರ ಬಿ.ಶ್ರೀರಾಮುಲು ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದಾರೆ. ಕೆಲವು ವಿಷಯಗಳು ಕುರಿತು ಮಾತನಾಡಿದ್ದು, ಇದು ಕುತೂಹಲ ಉಂಟಾಗಲು ಕಾರಣವಾಯಿತು.
ಭೇಟಿಗೂ ಮೊದಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸಕ್ಕೂ ತೆರಳಿದ್ದರು. ಸಿಎಂ ಭೇಟಿಗೂ ಮೊದಲು ಸುದ್ದಿಗಾರರ ಜೊತೆ ಮಾತನಾಡಿದ ಶ್ರಿರಾಮುಲು ಅವರು, ಈ ಭೇಟಿ ಯಾವುದೇ ರಾಜಕೀಯ ಕಾರಣಕ್ಕಲ್ಲ. ಮಗಳ ಮದುವೆ ಸಮಾರಂಭ ನಿಮಿತ್ತ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ಬಂದಿದ್ದೇನೆ. ಇದು ಖಾಸಗಿ ಭೇಟಿ ಎಂದು ಸ್ಪಷ್ಟಪಡಿಸಿದರು.
ಇನ್ನೂ ಮುಂದಿನ ತಿಂಗಳು ಡಿಸೆಂಬರ್ 7ರಂದು ಮಗಳ ಮದುವೆ ಇದೆ. ಬೆಂಗಳೂರು ಅರಮನೆ ಮೈದಾನದಲ್ಲಿ ಮದುವೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಸಂಬಂಧ ಲಗ್ನ ಪತ್ರಿಕೆಯನ್ನು ಉಪಮುಖ್ಯಮಂತ್ರಿ, ಮುಖ್ಯಮಂತ್ರಿ ಅವರಿಗೆ ನೀಡಿ ಆಹ್ವಾನಿಸಲು ಇಲ್ಲಿಗೆ ಬಂದಿದ್ದೇನೆ. ಯಾವುದೇ ರಾಜಕೀಯ ಕಾರಣವಾಗಲಿ ಇಲ್ಲ, ಅಂತಹ ಚರ್ಚೆಗಳು ನಡೆದಿಲ್ಲ ಎಂದರು.