ಬೆಂಗಳೂರು: ರಾಜ್ಯ ಬಜೆಟ್: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ನಮ್ಮ ಸಂಕಲ್ಪಗಳನ್ನು ಜನರ ಮುಂದಿಡುವ ದೊಡ್ಡ ಹೊಣೆಗಾರಿಕೆ ಮುಂದೆ ನಿಂತಿದ್ದೇನೆ. ನಾಳೆಗಳ ಬಗ್ಗೆ ಭರವಸೆ ಮೂಡಿಸುವ, ನಮ್ಮ ವಾಗ್ದಾನಗಳಲ್ಲಿ ಬಜೆಟ್ ಮಂಡಿಸುತ್ತಿದ್ದೇನೆ.
ಬುದ್ಧ, ಬಸವ, ನಾರಾಯಣಗುರು ಅವರ ಆಶಯಗಳಿವೆ. ಕುವೆಂಪು ಅವರ ಕವನ ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಳಿತುಕೊಂಡು ಬಜೆಟ್ ಮಂಡಿಸುತ್ತಿದ್ದಾರೆ. ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು.
ಸ್ಟಾಕ್ ತಂದಿಡೋ ಅಕ್ಕಿಯಲ್ಲಿ ಹುಳು ಆಗ್ಬಾರ್ದು ಅಂದ್ರೆ ಈ ಸಿಂಪಲ್ ಟ್ರಿಕ್ಸ್ ಟ್ರೈ ಮಾಡಿ..!
ಅದರಂತೆ, ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.