ಬೆಂಗಳೂರು: ಕಳೆದ ಕೆಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಬೊಮ್ಮಾಯಿ ಅವರಿಗೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯ ಸಲಹೆ ಮೇರೆಗೆ ಆಯುರ್ವೇದ ಚಿಕಿತ್ಸೆಗೆ ಒಳಗಾಗಿದ್ದಾರೆ. ನಾಟಿ ವೈದ್ಯ ಲೋಕೇಶ್ ಅವರ ಬಳಿ ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ನಾನು ಸಾಕಷ್ಟು ಜನರ ಬಳಿ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದೇನೆ. ಆದರೆ ಈ ವಿಚಾರವಾಗಿ ನಾನು ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಡುವುದಿಲ್ಲ. ನಿಮ್ಮ ಚಾನಲ್ ಗಳು ದೊಡ್ಡದಿವೆ ಇಂಥಹ ಸಣ್ಣ ಸುದ್ದಿಗಳು ಬೇಡ ಎಂದು ಹೇಳುವುದರ ಮೂಲಕ ಆಯುರ್ವೇದ ಚಿಕಿತ್ಸೆ ಬಗ್ಗೆ ಮಾತನಾಡಲು ಸಿಎಂ ನಿರಾಕರಣೆ ಮಾಡಿದ್ದಾರೆ ಎಂದು ಹೇಳಲಾಗಿದೆ.
