ಬೆಂಗಳೂರು:- ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆಯಲು ಸಿಎಂ ಹಿಂದೇಟು ಹಾಕುತ್ತಿದ್ದು, ಸಿದ್ದರಾಮಯ್ಯಗೆ ಧೈರ್ಯ ಇಲ್ಲ ಎಂಬುವುದು ಸಾಬೀತಾಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ರೈತರಿಗೆ ಗುಡ್ ನ್ಯೂಸ್: ಡಿಎಪಿ ಗೊಬ್ಬರಕ್ಕೆ ಸಬ್ಸಿಡಿ ಘೋಷಿಸಿದ ಕೇಂದ್ರ!
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆಯವರ ಹೆಸರು ಸಚಿನ್ ಡೆತ್ ನೋಟ್ ನಲ್ಲಿ ಉಲ್ಲೇಖವಾಗಿದೆ.
ದಾಖಲೆ ಇಲ್ಲದ ಕಾರಣ ಸಚಿವ ಸ್ಥಾನದಿಂದ ಕೈಬಿಡುವ ವಿಚಾರ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಮುಖ್ಯಮಂತ್ರಿಗಳೇ ಇದು ನಮಗೆ ಮೊದಲೇ ಗೊತ್ತಿದೆ. ನಿಮಗೆ ಧೈರ್ಯ ಇಲ್ಲ ಎಂಬುದು ನಮಗೆ ಗೊತ್ತಿದೆ ಎಂದು ಟೀಕಿಸಿದರು.
ಆ ಸಚಿವರ ತಂದೆಯವರು ಎಐಸಿಸಿ ಅಧ್ಯಕ್ಷರು. ನೀವು ಇದಕ್ಕೆ ಕೈ ಹಾಕಿದರೆ ಅವರು ನಿಮ್ಮ ಬುಡಕ್ಕೆ ಕೈ ಹಾಕುವ ಭಯ ನಿಮಗಿದೆ. ನೀವು ಕುರ್ಚಿಗೆ ಅಂಟಿ ಕುಳಿತವರು. ಇಷ್ಟೊತ್ತಿಗೆ ನೀವು ಅವರನ್ನು ವಜಾ ಮಾಡಬೇಕಿತ್ತು, ರಾಜೀನಾಮೆ ಪಡೆಯಬೇಕಾಗಿತ್ತು. ಬೇರೆ ಸರ್ಕಾರವಿದ್ದಾಗ ಸ್ವಲ್ಪ ಬಂದರೂ ಬೀದಿಗಿಳಿದು ಬೆಂಕಿ ಹಚ್ಚುತ್ತೀರಲ್ಲವೇ? ಈಗ ನಿಮ್ಮನ್ನು ತಡೆದೋರ್ಯಾರು ಎಂದು ಕಿಡಿಕಾರಿದರು.