ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೆ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ.
ಕಾಂಗ್ರೆಸ್ʼನಲ್ಲಿ ಮತ್ತೆ ಜೋರಾಯ್ತು ಡಿಸಿಎಂ ಕೂಗು: ಸಂಕ್ರಾಂತಿ ಹಬ್ಬಕ್ಕೂ ಮೊದಲೇ ಬ್ಲ್ಯಾಸ್ಟ್ ಆಗುತ್ತಾ ಫೈಟ್!
ಅವರು ಇಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಮಾಜಿ MLC ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಅವರ ಬೇಡಿಕೆಗಳ ಕುರಿತು ಚರ್ಚಿಸಿದರು. ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ. ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು.
ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.