ಬೆಂಗಳೂರು:- ಬಿಜೆಪಿ ತನ್ನ ಅವಧಿಯ ಹಗರಣಗಳನ್ನು ಮುಚ್ಚಿ ಹಾಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Shivakumar: ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಕ್ರಮ: DK ಶಿವಕುಮಾರ್!
ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಾಗಾದರೆ ಅವುಗಳು ಹಗರಣಗಳಲ್ಲವೇ? ಹಗರಣಗಳು ಎಂದು ಅವರು ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ
ಈಗಿನ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ಅವರ ಕಾಲದ ಅಕ್ರಮಗಳನ್ನು ಉಲ್ಲೇಖ ಮಾಡಿದ್ದು ಏಕೆಂದರೆ, ಅವರ ಕಾಲದಲ್ಲಿ ಜಾರಿ ನಿರ್ದೇಶನಾಲಯ ಮಧ್ಯ ಪ್ರವೇಶ ಮಾಡಲಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ ರೂ.ಗಳನ್ನು ನುಂಗಿಹಾಕಿದ್ದಾರೆ. ದೇವರಾಜ ಅರಸ್ ಟ್ರಕ್ ಟರ್ಮಿನಲ್ನಲ್ಲಿ 47 ಕೋಟಿ ರೂ.ಗಳಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು? ಇದನ್ನೆಲ್ಲಾ ಹೇಳಬಾರದೆ? ಎಂದರು. ಈಗಿನ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ ಎಂದು ತಿರುಗೇಟು ನೀಡಿದರು
ಮುಖ್ಯಮಂತ್ರಿಗಳು ಬೆದರಿಸುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಉತ್ತರಿಸಿದ ಸಿಎಂ ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು ಮುಂದಿಟ್ಟಿದ್ದೇನೆ ಎಂದರು