ಮೈಸೂರು: ಲೋಕಾಯುಕ್ತ ಮುಡಾ ಹಗರಣಕ್ಕೆ ಸಂಬಂಧಿಸಿ ಎಲ್ಲಾ ಆರೋಪಿಗಳ ವಿಚಾರಣೆ ನಡೆಸಿತ್ತು. ಇದೀಗ ಸಿಎಂ ಸಿದ್ದರಾಮಯ್ಯನವರ ಸರದಿ ಬಂದಿದೆ. ಇನ್ನು ಸಿದ್ದರಾಮಯ್ಯ ಅವರ ಜೀವನದ ಮೊದಲ ವಿಚಾರಣೆ ಇದಾಗಿದೆ. ಅವರು ಸುಮಾರ 40 ವರ್ಷಗಳಿಂದ ರಾಜಕಾರಣದಲ್ಲಿದ್ದು,
ಯಾವುದೇ ರೀತಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆ ಎದುರಿಸಿರಲಿಲ್ಲ. ಆದರೆ ಇದೀಗ ಸಿದ್ದರಾಮಯ್ಯನವರಿಗೆ ಮುಡಾ ಕಂಟಕ ಎದುರಾಗಿದ್ದು, ತಮ್ಮ 40 ವರ್ಷ ಸುದೀರ್ಘ ರಾಜಕಾರಣದಲ್ಲಿ ಇದೇ ಮೊದಲ ಬಾರಿಗೆ ಲೋಕಾಯುಕ್ತದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
Bank Recruitment: ಯೂನಿಯನ್ ಬ್ಯಾಂಕ್ʼನಲ್ಲಿದೆ ಭರ್ಜರಿ ಉದ್ಯೋಗಾವಕಾಶ.! ಡಿಗ್ರಿ ಪಾಸಾದವರಿಗೆ ₹ 85,000 ಸಂಬಳ
ಮೈಸೂರು ನಗರದ ಶೇಷಾದ್ರಿ ಅಯ್ಯರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ಅವರು ಕಾರು ಮೂಲಕ ಆಗಮಿಸಿದ್ದಾರೆ. ಬಳಿಕ ಮುಡಾ ಕೇಸ್ಗೆ ಸಂಬಂಧ ಪಟ್ಟಂತೆ ಲೋಕಾಯುಕ್ತ ಎಸ್ಪಿ ಉದೇಶ್ ಮುಂದೆ ಸಿಎಂ ವಿಚಾರಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಎ1 ಆರೋಪಿಯಾಗಿದ್ದು ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್
ಬೆಂಗಳೂರು ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಅಧಿಕಾರ ದುರ್ಬಳಕೆ ಮತ್ತು ಅಕ್ರಮದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ, ರಾಜ್ಯ ಸರಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.