ಬೆಂಗಳೂರು: ಈ ಸಲ ಕಪ್ ನಮ್ದೆ ಎಂದು ಆರ್ಸಿಬಿ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಶುಭಹಾರೈಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರಿರುವ ಅವರು ಇಂದಿನ WPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ ಎಂದರು.
ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ.
ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ ಎಂದು ಬರೆದುಕೊಂಡಿದ್ದಾರೆ.