ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ ಸಂಪುಟದ ಕೆಲ ಸಹೋದ್ಯೋಗಿ ಮತ್ತು ನಗರದ ಟಾಪ್ ಪೊಲೀಸ್ ಅಧಿಕಾರಿಗಳೊಂದಿಗೆ ಚಾಮರಾಜಪೇಟೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪೊಲೀಸ್ ಠಾಣೆಯನ್ನು ಉದ್ಘಾಟಿಸಿದರು. ನೂತನ ಕಟ್ಟಡದ ರಿಬ್ಬನ್ ಕಟ್ ಮಾಡಿದರು.
ನಂತರ ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದರು.