ಬೆಳಗಾವಿ: ಯತ್ನಾಳ್ (Basangouda Patil Yatnal) ಒಬ್ಬ ದ್ವೇಷದ ರಾಜಕಾರಣಿ, ಮಹಾನ್ ಸುಳ್ಳುಗಾರ, ಚುನಾವಣೆ ಗೆಲ್ಲಲು ಈ ರೀತಿ ಮಾತಾಡಬಾರದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ. ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಸಿಸ್ ನಂಟಿರುವ ಪೀರಾ ಮೌಲಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂಬ ಬಿಜೆಪಿ ನಾಯಕ ಯತ್ನಾಳ್ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ.
ತೆಲಂಗಾಣದ 2ನೇ ಮುಖ್ಯಮಂತ್ರಿ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ
ಅವರ ಜೊತೆಗೆ ನನಗೆ ಬಹಳ ವರ್ಷಗಳ ಸಂಬಂಧ ಇದೆ. ಆಗೆಲ್ಲ ಯಾಕೆ ಅವರು ಸುಮ್ಮನಿದ್ದರು? ಪೀರಾ ಮೌಲಿ ಅವರು ಆರೋಪ ಸಾಬೀತು ಮಾಡಿ ಎಂದು ಹೇಳಿದ್ದಾರೆ. ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇದೆ ಅದನ್ನು ಸಾಬೀತು ಮಾಡಲಿ ಎಂದು ಸವಾಲು ಹಾಕಿದ್ದಾರೆ. ಈಗ ಆರೋಪ ಮಾಡುತ್ತಿರುವ ಯತ್ನಾಳ್, ಅವರದ್ದೇ ಸರ್ಕಾರ ಇದ್ದಾಗ ಏನು ಮಾಡ್ತಿದ್ರು? ಅವರು ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ವಿರೋಧ ಪಕ್ಷದ ನಾಯಕನ ಸ್ಥಾನಕ್ಕೂ ಪ್ರಯತ್ನ ಮಾಡಿದ್ದರು. ಎರಡೂ ಸಿಗಲಿಲ್ಲ ಅದಕ್ಕೆ ಈಗ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.