ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು, 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ಕೊಟ್ಟಿದ್ದಾರೆ. ಜ್ಯೋತಿ ಬೆಳಗಿಸುವ ಮೂಲಕ ಸಿದ್ದರಾಮಯ್ಯ ಚಾಲನೆ ಕೊಟ್ಟಿದ್ದಾರೆ.
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಇಂದಿನಿಂದ 8 ದಿನಗಳ ಕಾಲ ನಡೆಯಲಿದೆ. 60ಕ್ಕೂ ಹೆಚ್ಚು ವಿದೇಶಿ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ. ದೇಶ- ವಿದೇಶಗಳ ಸಿನಿಮಾ ಪ್ರದರ್ಶನ ಕಾಣಲಿದೆ.
ಈ ವೇಳೆ ವೇಳೆ, ನಟ ಶಿವರಾಜ್ಕುಮಾರ್ ಚಲನಚಿತ್ರೋತ್ಸವದ ಕೈಪಿಡಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಕೆಜೆ ಜಾರ್ಜ್, ಸಭಾಪತಿ ಬಸವರಾಜ್ ಹೊರಟ್ಟಿ, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲಾ, ನಟ ಶಿವರಾಜ್ ಕುಮಾರ್, ರಾಯಭಾರಿ ಕಿಶೋರ್ ಕುಮಾರ್, MLC ನಜೀರ್ ಅಹಮದ್, ಗೋವಿಂದ್ ರಾಜ್, ಶಾಸಕರಾದ ರಿಜ್ವಾನ್ ಅರ್ಷದ್, ಸಲೀಂ ಅಹಮದ್, ಉಮಾಶ್ರೀ, ಸೌತ್ ನಟಿ ಪ್ರಿಯಾಂಕಾ ಮೋಹನ್ ಭಾಗಿಯಾಗಿದ್ದರು.