ಬೆಂಗಳೂರು:- ಸಾವಿರಾರು ಕಲಾವಿದರ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವ ಹಾಗೂ ಅವರು ರಚಿಸಿದ ಕಲಾಕೃತಿಗಳ ಮಾರಾಟಕ್ಕೆ ಅವಕಾಶ ಒದಗಿಸುವ 22ನೇ ‘ಚಿತ್ರಸಂತೆ’ಯನ್ನು ಸಿಎಂ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು.
ಈ ಬಾರಿಯ ಚಿತ್ರಸಂತೆಯನ್ನು ‘ಹೆಣ್ಣು ಮಗುವಿಗೆ’ ಸಮರ್ಪಣೆ ಮಾಡಲಾಗಿದೆ. ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಚಿತ್ರಕಲಾ ಪರಿಷತ್ನ ಪ್ರವೇಶ ದ್ವಾರದಲ್ಲಿ 35 ಅಡಿ ಎತ್ತರದ ಕಲಾಕೃತಿ ನಿರ್ಮಿಸಲಾಗಿದೆ. ಬೆಳಗ್ಗೆ 6 ಕ್ಕೆ ಆರಂಭವಾಗಿರುವ ಚಿತ್ರಸಂತೆ ರಾತ್ರಿ 9 ರವರೆಗೂ ನಡೆಯಲಿದ್ದು, ಪ್ರತಿ ಬಾರಿಯಂತೆ ಈ ಬಾರಿಯೂ ಸಾವಿರಾರು ಕಲಾವಿದರು ತಮ್ಮ ಕಲಾ ಪ್ರತಿಭೆಯನ್ನು ಅರಳಿಸಿದ್ದಾರೆ.
ಬೇರೆ ಬೇರೆಯ ರಾಜ್ಯಗಳ ಮೂರೂವರೆ ಸಾವಿರಕ್ಕೂ ಹೆಚ್ಚು ಕಲಾವಿದರು ಚಿತ್ರಸಂತೆಯಲ್ಲಿ ಪಾಲ್ಗೊಂಡಿದ್ದಾರೆ. ಪೆನ್ಸಿಲ್ ಸ್ಕೆಚ್ನಿಂದ ಹಿಡಿದು ತೈಲವರ್ಣ, ಜಲವರ್ಣ, ಆಕ್ರೋಲಿಕ್, ಮೈಸೂರು ಶೈಲಿ, ರಾಜಸ್ಥಾನಿ ಶೈಲಿ, ಆಕ್ರೋಲಿಕ್, ಪಾರಂಪರಿಕ, ಆಧುನಿಕ ಪ್ರಕಾರಗಳ ಕಲಾಕೃತಿಗಳನ್ನು ಪ್ರದರ್ಶನಕ್ಕಿಡಲಾಗಿದೆ. ಕನಿಷ್ಟ 100 ರೂ.ನಿಂದ ಮೂರ್ನಾಲ್ಕು ಲಕ್ಷ ರೂ. ವರೆಗೂ ಕಲಾಕೃತಿಗಳನ್ನು ಮಾರಾಟ ಮಾಡಲಾಗ್ತಿದೆ.