ಬೆಂಗಳೂರು: ರಾಜ್ಯ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮೇ. 20ಕ್ಕೆ ಅಧಿಕಾರಕ್ಕೆ ಎರಡು ವರ್ಷದ ತುಂಬಿದ ಹಿನ್ನೆಲೆಯಲ್ಲಿ ಕಾರ್ಯಕರ್ತರ ಜೊತೆ ಸಂಭ್ರಮಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನದ ಬಳಿಕ ಕಾರ್ಯಕರ್ತರ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಭೆ ನಡೆಸಿ ಕಾರ್ಯಕರ್ತರ ಅಹವಾಲುಗಳನ್ನು ತಿಳಿಯಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಿರುವ ಸಿಎಂ, ಕಾರ್ಯಕರ್ತರ ಸಮಸ್ಯೆ, ಅಹವಾಲುಗಳನ್ನ ಜೊತೆ ಚರ್ಚಿಸಿ ಪರಿಹಾರಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಕೆಲ ಉಸ್ತುವಾರಿ ಸಚಿವರ ವಿರುದ್ದ ಶಾಸಕರು ಹಾಗೂ ಕಾರ್ಯಕರ್ತರು ಅಸಮಧಾನ ಹೊರಹಾಕಿರುವ ಹಿನ್ನೆಲೆಯಲ್ಲಿ ಅಸಮಧಾನಕ್ಕೆ ಬ್ರೇಕ್ ಹಾಕಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ದತೆಗೂ ತಂತ್ರ ರೂಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ..