ಹಾಸನ: ಪ್ರಸಿದ್ದ ಹಾಸನಾಂಬ ಜಾತ್ರೆ ಅದ್ಧೂರಿಯಾಗಿ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಿದ್ಧ ಹಾಸನಾಂಬೆ ದರ್ಶನ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಕೆಎನ್ ರಾಜಣ್ಣ, ಶಾಸಕ ಶಿವಲಿಂಗೇಗೌಡ ಸಾಥ್ ನೀಡಿದರು.
“ದೀರ್ಘಕಾಲದ ಬೆನ್ನು ನೋವು” ಇಲ್ಲಿದೆ ಸರಳ ಚಿಕಿತ್ಸೆ: ಪರಿಹಾರ, ಉಚಿತ ಸಲಹೆ
ಹಾಸನಾಂಬೆ ದರ್ಶನದ ಬಳಿಕ ಸಿಎಂ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ. ಈ ಬಾರಿ ಮುಖ್ಯಮಂತ್ರಿಯಾದ ಬಳಿಕ ಸಿದ್ದರಾಮಯ್ಯ ಇಂದು ಎರಡನೇ ಬಾರಿಗೆ ಹಾಸನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ನಾಡಪ್ರಭು ಕೆಂಪೇಗೌಡರ ಜಯಂತಿಯ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿಎಂ ಹಾಸನಕ್ಕೆ ಆಗಮಿಸಿದ್ದರು.