ಬೆಂಗಳೂರು:- ನವಂಬರ್ 27ರಂದು ಸಿಎಂ ಸಿದ್ದರಾಮಯ್ಯ ಜನತಾ ದರ್ಶನ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷವು ಜನತಾ ದರ್ಶನ ನಡೆಸುವ ಮೂಲಕ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಜನತೆಗೆ ಮತ್ತಷ್ಟು ಹತ್ತಿರವಾಗುವ ಬಗ್ಗೆ ಚಿಂತನೆ ನಡೆಸಿದೆ.
ಇನ್ನು ಜನತಾ ದರ್ಶನದಲ್ಲಿ ಭಾಗಿಯಾಗುವ ಜನರು ನಿಮ್ಮಗಳ ಜಯೆ ಈ ಅಗತ್ಯ ದಾಖಲೆಗಳನ್ನು ಕೊಂಡೊಯ್ಯುವುದು ಅತ್ಯಗತ್ಯ ಎಂದು ತಿಳಿದು ಬಂದಿದೆ. ಈ ಕುರಿತು ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಗೃಹ ಕಚೇರಿ ಕೃಷ್ಣಾದಲ್ಲಿ ನವೆಂಬರ್ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರ ಕುಂದುಕೊರತೆ ಆಲಿಸಲಿದ್ದಾರೆ. ಜನತಾ ದರ್ಶನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾಹಿತಿಯನ್ನು ಹಂಚಿಕೊಂಡಿದೆ.
ನವೆಂಬರ್ 27ರಂದು ಸಿಎಂ ನಡೆಸಲಿರುವ ಜತನಾ ದರ್ಶನದಲ್ಲಿ ರಾಜ್ಯ ಸರ್ಕಾರದ ಸಚಿವರು ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ತಿಳಿದು ಬಂದಿದೆ