ಬೆಂಗಳೂರು: ಅಧಿವೇಶನದ ವೇಳೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 16 ತಿಂಗಳಾಗಿದ್ದು, 16 ಹಗರಣಗಳಲ್ಲಿ ಭಾಗಿಯಾಗಿದೆ. ಇವೆಲ್ಲವುಗಳ ಬಗ್ಗೆ ಚರ್ಚಿಸಲು ಬಿಜೆಪಿ ನಿರ್ಧರಿಸಿದೆ. ಈ ಹಿಂದಿನ ಅಧಿವೇಶನದಲ್ಲಿ ಒಂದು ವಿಕೆಟ್ ಉರುಳಿತ್ತು. ಮುಂಬರುವ ಅಧಿವೇಶನದ ವೇಳೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ.
ಜತೆಗೆ ಸಂಪುಟದ ಇನ್ನಿಬ್ಬರು ಸಚಿವರ ವಿಕೆಟ್ಗಳೂ ಉರುಳಲಿವೆ,” ಎಂದು ಭವಿಷ್ಯ ನುಡಿದರು. ದಿನೇ ದಿನೆ ರಾಜ್ಯ ಸರಕಾರದ ಒಂದೊಂದೇ ಹಗರಣಗಳು ಹೊರಗೆ ಬರುತ್ತಿವೆ. ಈ ಹಗರಣಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ದುರುದ್ದೇಶದಿಂದ ಹಿಂದಿನ ಸರಕಾರದ ಅವಧಿಯ ಅಭಿವೃದ್ಧಿ ಕಾರ್ಯ, ಯೋಜನೆಗಳ ತನಿಖೆ ನಡೆಸುವುದಾಗಿ ಸರಕಾರ ಹೇಳುತ್ತಿದೆ.
Jio Offer: ಜಿಯೋ ಬಳಕೆದಾರರಿಗೆ ಗುಡ್ ನ್ಯೂಸ್! ಅತಿ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್!
ಈಗ ಕೋವಿಡ್ ಅವಧಿಯಲ್ಲಾದ ಅಕ್ರಮಗಳ ತನಿಖೆ ಮಾಡುವುದಾಗಿ ಹಾಗೂ ಕಲ್ಯಾಣ ಕರ್ನಾಟಕ ಯೋಜನೆ ತನಿಖೆ ನಡೆಸುವುದಾಗಿ ಸರಕಾರ ಹೇಳಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದ ಕಾಂಗ್ರೆಸ್ ಅದಕ್ಕೆ ಪೂರಕ ಸಾಕ್ಷ್ಯ ಒದಗಿಸಲು ವಿಫಲವಾಗಿತ್ತು. ಹಿಂದೆ ದೇಶಾದ್ಯಂತ ಕೋವಿಡ್ ಸಾಂಕ್ರಾಮಿಕ ಹರಡಿತ್ತು. ಹಾಗೆಂದ ಮಾತ್ರಕ್ಕೆ ದೇಶದೆಲ್ಲೆಡೆ ತನಿಖೆ ನಡೆಸಬೇಕೆ,” ಎಂದು ಆರ್.ಅಶೋಕ್ ಪ್ರಶ್ನಿಸಿದರು.