ಬೆಂಗಳೂರು/ ಬೀದರ್ : ನಾಳೆ ಬೀದರ್ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಧಿಕಾರಿ ಕೆ.ಚಿರಂಜೀವಿ ಮಾಹಿತಿ ನೀಡಿದ್ದಾರೆ. ಬೆಳಗ್ಗೆ 11ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12.15ಕ್ಕೆ ಬೀದರ್ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಸಿಎಂ ಸಿದ್ದರಾಮಯ್ಯ
ಮಧ್ಯಾಹ್ನ 12.20ಕ್ಕೆ ಬೀದರ್’ನಿಂದ ಹೆಲಿಕ್ಯಾಪ್ಟರ್ ಮೂಲಕ ಭಾಲ್ಕಿಗೆ ತೆರಳುವರು ನಂತರ ಭಾಲ್ಕಿ ಪಟ್ಟಣದ ಬಿಕೆಐಟಿ ಕಾಲೇಜಿನಲ್ಲಿ ನಡೆಯಲಿರುವ ಮಾಜಿ ಸಚಿವ ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಲೋಕನಾಯಕ ಅಭಿನಂದನ ಗ್ರಂಥ ಬಿಡುಗಡೆಗೊಳಿಸುವರು.
ಸಂಜೆ 4ಕ್ಕೆ ಭಾಲ್ಕಿಯಿಂದ ಬೀದರ್ಗೆ ಬಂದು, ಅಲ್ಲಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಪ್ರಯಾಣ ಬೆಳಸಲಿದ್ದಾರೆ.