ಹಾವೇರಿ : ಜ 13 – ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಜನವರಿ 15 ರಂದು ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾಯ೯ಕ್ರಮಗಳಲ್ಲಿ ಭಾಗವಹಿಸಲಿದ್ದಾರೆ
ಸೋಮವಾರ ಬೆಳಿಗ್ಗೆ 11.30 ಗಂಟೆಗೆ ಸುಕ್ಷೇತ್ರ ನರಸೀಪುರ (ಕಂಚಾರಗಟ್ಟಿ )ದಲ್ಲಿ ಜರುಗಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ೬ ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ೯೦೪ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1.30 ಗಂಟೆಗೆ ಬ್ಯಾಡಗಿ ತಾಲೂಕಾ ಚಿಕ್ಕಬಾಸೂರು ಗ್ರಾಮದಲ್ಲಿ ಅಯೋಜಿಸಲಾದ ಶ್ರೀ ಗುರುವಶಿವಯೋಗಿಸಿದ್ದಾರಾಮೇಶ್ವರರ 851 ನೇ ಜಯಂತಿ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಬೆಂಗಳೂರಿನಿಂದ ವಿಮಾನದಲ್ಲಿ ಹೊರಟು ಹುಬ್ಬಳ್ಳಿಗೆ ಆಗಮಿಸಿ ಹೆಲಿಕ್ಯಾಪ್ಟರ್ ಮೂಲಕ ಹಾವೇರಿ ಜಿಲ್ಲೆ ನರಸೀಪುರಕ್ಕೆ 11.20 ಗಂಟೆಗೆ ಆಗಮಿಸಲಿದ್ದಾರೆ .
ನಿಗದಿತ ಕಾಯ೯ಕ್ರಮದಲ್ಲಿ ಭಾಗವಹಿಸಿ 1.20 ಗಂಟೆಗೆ ನರಸೀಪುರದಿಂದ ಬ್ಯಾಡಗಿ ತಾಲೂಕು ಚಿಕ್ಕ ಬಾಸೂರು ಗ್ರಾಮಕ್ಕೆ ಆಗಮಿಸಲಿದ್ದಾರೆ ನಿಗದಿತ ಕಾಯ೯ಕ್ರಮದಲ್ಲಿ ಭಾಗವಹಿಸಿ ಸಂಜೆ 4.45 ಕ್ಕೆ ಚಿಕ್ಕ ಬಾಸೂರು ಹೆಲಿಪ್ಯಾಡ್ ನಿಂದ ಹುಬ್ಬಳ್ಳಿ ಗೆ ಪ್ರಯಾಣ ಬೆಳಸಲಿದ್ದಾರೆ.