ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂಕೋರ್ಟ್ ನೀಡಿದ್ದ ಹಲವು ತೀರ್ಪುಗಳು ನನ್ನ ಕಣ್ಮುಂದೆ ಇದೆ. ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್ನಲ್ಲಿ ಚರ್ಚೆ ಆಗಿದೆ. ಈ ಕೇಸ್ ಕೋರ್ಟ್ನಲ್ಲಿ ಇದ್ದಾಗ ರಾಜ್ಯ ಸರ್ಕಾರದ ನಿರ್ಧಾರ ತಪ್ಪು. ಕಾನೂನಿಗಿಂತ ದೊಡ್ಡವರು ಎಂಬುದನ್ನು ಪ್ರದರ್ಶನ ಮಾಡಿಕೊಂಡಿದ್ದಾರೆ. ಲೂಟಿ ಮಾಡುವವರಿಗೆ ನಮ್ಮ ಸರ್ಕಾರ ಎಂಬುದನ್ನು ನಿರೂಪಿಸಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.
Bangalore Kambala: ಅರಮನೆ ಮೈದಾನ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ : ಇಲ್ಲಿದೆ ಡಿಟೇಲ್ಸ್
ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ದರೋಡೆಕೋರರನ್ನು ರಕ್ಷಣೆ ಮಾಡಲು ಈ ಸರ್ಕಾರ ಇರುವುದು. ಕೋರ್ಟ್ನಲ್ಲಿ ಏನು ನಿರ್ಧಾರ ಆಗುತ್ತೆಂದು ನೋಡಿ ಮಾತಾಡುತ್ತೇನೆ. ಮರ್ಯಾದೆ ಇಲ್ಲದವರಿಗೆ ಕೋರ್ಟ್ನಲ್ಲಿ ಇದ್ದರೇನು, ಎಲ್ಲಿದ್ದರೇನು? ಎಲ್ಲವನ್ನೂ ದುಡ್ಡಿನಿಂದ ಕೊಂಡುಕೊಳ್ಳುತ್ತೇವೆ ಅನ್ನೋ ದುರಹಂಕಾರ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪರೋಕ್ಷವಾಗಿ ಕಿಡಿಕಾರಿದ್ದಾರೆ.