ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ 3 ದಿನ ಅಕ್ಟೋಬರ್ 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ 10.25ಕ್ಕೆ ವಿಮಾನದ ಮೂಲಕ ಮೈಸೂರಿಗೆ ತೆರಳಲಿದ್ದಾರೆ. ಇಂದು ಮತ್ತು ನಾಳೆ ಎರಡು ದಿನ ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ನಂತರ, ಸಿಎಂ ಸಿದ್ದರಾಮಯ್ಯ ಭಾನುವಾರ ಧಾರವಾಡ ಮತ್ತು ಬೆಳಗಾವಿಗೆ ತೆರಳಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಅಕ್ಟೋಬರ್ 12 ರಂದು ಬೆಳಿಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 1.41 ರಿಂದ 2.10ರ ನಡುವೆ ಅರಮನೆಯ ಬಲರಾಮ ದ್ವಾರದಲ್ಲಿರುವ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ.
Pension: ಹಿರಿಯ ನಾಗರಿಕರಿಗೆ ಶಾಕ್ ಕೊಟ್ಟ ಮೋದಿ ಸರ್ಕಾರ! ಈ ದಾಖಲೆ ಕೊಡದಿದ್ರೆ ಪಿಂಚಣಿ ರದ್ದಾಗುವುದು ಪಕ್ಕಾ
ಸಂಜೆ 4 ಗಂಟೆಯಿಂದ 4.30ರ ಒಳಗಾಗಿ ಅರಮನೆ ಒಳಾವರಣದಲ್ಲಿ ಅಂಬಾರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಬನ್ನಿಮಂಟಪ ಮೈದಾನದಲ್ಲಿ ರಾತ್ರಿ 7 ಗಂಟೆಗೆ ಆಯೋಜಿಸಿರುವ ಪಂಜಿನ ಕವಾಯತು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.