ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗದಲ್ಲಿ ಅಖಿಲ ಭಾರತ ಶೋಷಿತರ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಮಾವೇಶ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಮಾದಾರ ಚೆನ್ನಯ್ಯ ಗುರುಪೀಠದ ಹಿಂದೆ ಸುಮಾರು 150 ಎಕರೆ ವಿಸ್ತಾರ ಜಾಗೆಯಲ್ಲಿ ಕಾರ್ಯಕ್ರಮ ವೇದಿಕೆ ನಿರ್ಮಾಣ ಮಾಡಲಾಗಿದೆ. ಸುಮಾರು 5 ಲಕ್ಷ ಜನ ಸೇರುವ ನಿರೀಕ್ಷೆ ಇದ್ದು,
ವೇದಿಕೆ ಮುಖಂಭಾಗ ಮೂರು ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಸೇರಿದಂತೆ ಹೊರ ರಾಜ್ಯದ ಶೋಷಿತ ಸಮುದಾಯಗಳ ಮುಖಂಡರು ಭಾಗಿಯಾಗಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಿ. ಸುಧಾಕರ್, ಎಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ, ದಿನೇಶ್ ಗುಂಡೂರಾವ್, ರಹೀಂ ಖಾನ್, ಕೆ.ಎಚ್. ಮುನಿಯಪ್ಪ, ಕೆ.ಎನ್. ರಾಜಣ್ಣ ಸೇರಿದಂತೆ ಜಿಲ್ಲೆಯ ಶಾಸಕರು,
Govt Scheme: ಬ್ಯುಸಿನೆಸ್ ಮಾಡುವವರಿಗೆ ಕೇಂದ್ರ ಸರ್ಕಾರದಿಂದ ಲೋನ್.! ಸುಲಭವಾಗಿ ಪಡೆಯಿರಿ 10 ಲಕ್ಷ ರೂ.
ಗಣ್ಯರು ಭಾಗಿಯಾಗಲಿದ್ದಾರೆ. ಇನ್ನು ಸಮಾವೇಶ ನಡೆಯುವ ಸ್ಥಳದಲ್ಲಿ ನಾಲ್ಕು ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಸುಗಮ ಸಂಚಾರ ದೃಷ್ಟಿಯಿಂದ ಪ್ರಯಾಣಿಕರಿಗೆ ಬದಲಿ ಮಾರ್ಗಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಶೋಷಿತ ಸಮುದಾಯದ ಸದಸ್ಯರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಅಂತಾ ಕಾರ್ಯಕ್ರಮ ಸಂಘಟಕರು ಕೋರಿದ್ದಾರೆ.