ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಪ್ಪುತ್ತಿಲ್ಲ. ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮತ್ತೊಂದು ದಾಖಲೆ ಬಿಡುಗಡೆ ಮಾಡಿದ್ದಾರೆ.
Rains Alert: ನವೆಂಬರ್13 ರಿಂದ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ವಿಚಾರದಲ್ಲಿ ತಹಶೀಲ್ದಾರ್ ಹಣ ಪಾವತಿಸಿದ್ದಾರೆ. ಮುದ್ರಾಂಕ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿ ಮಾಡಿದ್ದಾರೆ ಎಂದು ಮತ್ತೊಂದು ಕ್ರಯಪತ್ರದ ಮೂಲಕ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ದೂರುದಾರ ಸ್ನೇಹಮಯಿ ಕೃಷ್ಣ ಸಿಎಂ ಪತ್ನಿ ಪಾರ್ವತಿ ಅವರ ಕ್ರಯಪತ್ರದಲ್ಲಿ ಮುದ್ರಾಂಕ ಶುಲ್ಕ ಪಾವತಿಯನ್ನು ತಹಶೀಲ್ದಾರ್ ಮಾಡಿದ್ದಾರೆ. ನನ್ನ ಆರೋಪಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಕೇಳಿದ್ದಾರೆ.
ಕ್ರಯಪತ್ರ ನೋಂದಣಿ ಮಾಡಿಸಿಕೊಳ್ಳುವವರು ನೋಂದಣಿಗೆ ಸಂಬಂಧಿಸಿದ ಶುಲ್ಕಗಳನ್ನು ಪಾವತಿ ಮಾಡಬೇಕು, ಅದೇ ರೀತಿ ಎನ್.ಮಂಜುನಾಥ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ. ಆದರೆ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಕ್ರಯಪತ್ರ ಗಮನಿಸಿ, ಮುಡಾದ ವಿಶೇಷ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ ಎಂಬುದು ಖಚಿತವಾಗಿ ತಿಳಿದುಬರುತ್ತದೆ.