ಕೋಲಾರ: ಕೋಲಾರಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದು, ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನಲ್ಲಿ ಯರಗೋಳ್ ನೀರಾವರಿ ಯೋಜನೆ ಲೋಕಾರ್ಪಣೆಗೊಳಿಸಲಿದ್ದಾರೆ. HAL ನಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11.30 ಕ್ಕೆ ಯರಗೋಳ್ ಗೆ ಆಗಮಿಸಲಿರುವ ಸಿದ್ದರಾಮಯ್ಯ ಅವರಿಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಕೃಷ್ಣಬೈರೇಗೌಡ, ಕೆಹೆಚ್ ಮುನಿಯಪ್ಪ ಹಾಗೂ ಜಿಲ್ಲೆಯ ಶಾಸಕರು ಸಾಥ್ ನೀಡಲಿದ್ದಾರೆ. ಅದರಂತೆ ಯರಗೋಳ್ ಡ್ಯಾ. ಪಕ್ಕದಲ್ಲಿಯೇ ಬೃಹತ್ ವೇದಿಕೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಸಜ್ಜುಗೊಳಿಸಿದ್ದು ಸುಮಾರು 15 ಸಾವಿರ ಜನರು ಸೇರುವ ನಿರೀಕ್ಷೆ ಇದೆ.
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ʼನಲ್ಲಿದೆ ಉದ್ಯೋಗಾವಕಾಶ..! ಬೆಂಗಳೂರಿನಲ್ಲಿಯೇ ಪೋಸ್ಟಿಂಗ್
ಜೊತೆಗೆ ಕಾರ್ಯಕ್ರಮದಲ್ಲಿ ಯಾವುದೇ ಅಹಿತರಕ ಘಟನೆಗಳು ನಡೆಯದಂತೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇನ್ನೂ ಬಂಗಾರಪೇಟೆ, ಕೋಲಾರ, ಮಾಲೂರು ಹಾಗೂ ಮಾರ್ಗ ಮಧ್ಯೆಯ 45 ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಇದಾಗಿದ್ದು,2006 ರಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದ ವೇಳೆ ಯರಗೋಳ್ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಚಾಲನೆ ನೀಡಲಾಗಿತ್ತು . ನಂತರ ಯೋಜನೆ ನೆನೆಗುದಿಗೆ ಬಿದ್ದಿದ್ದು ಜಿಲ್ಲೆಯ ಶಾಸಕರ ಒತ್ತಾಯದ ಮೇರೆಗೆ 2013 ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಯೋಜನೆಯನ್ನ ಕೈಗೆತ್ತಿಕೊಂಡಿದ್ದು ಇದೀಗ 17 ವರ್ಷಗಳ ನಂತರ ಯರಗೋಳ್ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡಿದೆ.