ಬೆಂಗಳೂರು: ಹೊಸವರ್ಷದ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರಿನ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಗರದ ವೈಯಾಲಿಕಾವಲ್ ಬಡಾವಣೆಯಲ್ಲಿ ಇರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಇದೇ ವೇಳೆ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಬಸವರಾಜ್ ಬೊಮ್ಮಾಯಿ ಅವರು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಚಿವ ಮುನಿರತ್ನ, ಟಿಟಿಡಿ ನಿರ್ದೇಶಕ ಶಶಿಧರ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
