ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಅವರು ವರ್ಚುವಲ್ ಮೂಲಕ ಸಭೆ ನಡೆಸಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಫೆಬ್ರವ ರಿಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕೇಸ್ ಬರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಾದಯಾತ್ರೆ,
ಬೆಂಗಳೂರಿಗೆ ಪ್ರವೇಶಿಸಿದರೆ ಮತ್ತಷ್ಟು ಸೋಂಕು ಉಲ್ಬಣವಾಗುವ ಸಾಧ್ಯತೆ ಇದ್ದು, ಹೀಗಾಗಿ ಪಾದಯಾತ್ರೆಯ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳುವ ಸಂಬಂಧ ಚರ್ಚೆ ನಡೆಸಿದ್ದು, ಅಲ್ಲದೇ ಬಿಡದಿಯಲ್ಲೇ ಪಾದಯಾತ್ರೆ ತಡೆಯುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಇನ್ನೂ ಬೆಂಗಳೂರಿನಲ್ಲಿ ಮಿತಿ ಮೀರಿ ಕೊರೊನಾ ಹೆಚ್ಚಾಗುತ್ತಿರುವುದರಿಂದ ಬೆಂಗಳೂರು ಬಹುತೇಕ ಲಾಕ್ ಆಗುವುದು ಪಕ್ಕಾ ಎಂದು ಹೇಳಲಾಗುತ್ತಿದೆ.
