ಬೆಂಗಳೂರು:- ಕರ್ನಾಟಕದಲ್ಲಿ ಮುಂದಿನ 3 ದಿನ ಶೀತಗಾಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಎಚ್ಚರ ಜನರೇ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಪತ್ತೆಯಾಯ್ತು ಎಚ್ಎಂಪಿವಿ ವೈರಸ್!
ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ್ದು, ಜನ ಅಗತ್ಯ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ರಾಜ್ಯಾದ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು, ಕೆಲವೆಡೆ 15 ಡಿಗ್ರಿಗಿಂತ ಕೆಳಗೆ ತಾಪಮಾನ ಕುಸಿದಿದೆ. ಮುಂದಿನ 3 ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ.