ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಜೋರಾಗಿದೆ. ಉತ್ತರ ಕರ್ನಾಟಕದ ಕೆಲವೆಡೆ ಶೀತ ಗಾಳಿ ಜೋರಾಗಿದೆ, ಡಿಸೆಂಬರ್ 20ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆಯಲ್ಲಿ ಚಳಿ ಹೆಚ್ಚಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ.
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯಪುರದಲ್ಲಿ 8.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.