ಹಾಸನ:- ಮೈಲಾರಲಿಂಗನ ಹೆಸರಲ್ಲಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಸ್ವಾಮೀಜಿಗಳನ್ನು ಅರೆಸ್ಟ್ ಮಾಡಲಾಗಿದೆ.
Protest: ಬಸ್ ದರ ಏರಿಕೆ ಖಂಡಿಸಿ ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ!
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕಣಕಟ್ಟೆ ಹೋಬಳಿ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ದಾನ ಕೇಳುವ ನೆಪದಲ್ಲಿ ಕಳ್ಳ ಸ್ವಾಮೀಜಿಗಳು ಒಂಟಿ ಮನೆಯೊಂದಕ್ಕೆ ನುಗ್ಗಿದ್ದ ಕಳ್ಳ ಸ್ವಾಮೀಜಿಗಳು, ಮತ್ತವರ ಸಹಚರರನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಜರುಗಿದೆ.
ನಾವು ಜೇನುಕಲ್ ಸಿದ್ದೇಶ್ವರಸ್ವಾಮಿ ಮಠದವರಾಗಿದ್ದು, ಹೆಚ್ಚಿನ ಧನ ಸಹಾಯ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಅನುಮಾನಗೊಂಡು ತಕ್ಷಣವೆ ಎಚ್ಚೆತ್ತ ಮಹಿಳೆ ಗ್ರಾಮಸ್ಥರಿಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗ್ರಾಮಸ್ಥರು. ಸ್ಥಳೀಯರು ಬರುತ್ತಿದ್ದಂತೆ ಕಳ್ಳ ಸ್ವಾಮೀಜಿಗಳ ಗ್ಯಾಂಗ್ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಇಬ್ಬರು ನಕಲಿ ಸ್ವಾಮೀಜಿ ಸೇರಿ ಐವರನ್ನು ಹಿಡಿದು ಗ್ರಾಮಸ್ಥರು ಹಿಗ್ಗಾಮುಗ್ಗಾ ಗೂಸಾ ಕೊಟ್ಟಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿ ಹಣದ ಸಮೇತ ಗ್ರಾಮಸ್ಥರು ಐವರನ್ನು ಪೊಲೀಸರಿಗೊಪ್ಪಿಸಿದ್ದಾರೆ.
ಕಳೆದ ವರ್ಷ ನವೆಂಬರ್ 3 ರಂದು ಇದೇ ಗ್ಯಾಂಗ್ ಕಲ್ಲುಂಡಿ ಗ್ರಾಮಕ್ಕೆ ಭಿಕ್ಷೆ ಕೇಳುವ ನೆಪದಲ್ಲಿ ಬಂದಿದ್ದರು. ಆಗ ಪಿಸ್ತೂಲ್ ತೋರಿಸಿ ಪರಾರಿಯಾಗಿದ್ದರು. ಇದೀಗ ನಗದು ಸಹಿತ ಸಿಕ್ಕಿಬಿದ್ದಿದ್ದಾರೆ. ಗ್ರಾಮಸ್ಥರು ಹಿಗ್ಗಾಮುಗ್ಗಾ ಗೂಸಾ ಕೊಟ್ಟು ಬಾಣಾವಾರ ಪೊಲೀಸರಿಗೊಪ್ಪಿಸಿದ್ದಾರೆ