ಗಂಗಾವತಿ:– ತಾಲೂಕಿನ ವಡ್ಡರಹಟ್ಟಿ ಗ್ರಾಮದಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬೈಕ್ ಸವಾರ 46 ವರ್ಷದ ಮುರ್ತುಜಾ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಮೂಲಕ ರಸ್ತೆ ದಾಟುವಾಗ ಅಪಘಾತ ಸಂಭವಿಸಿದೆ. ತಿಂಗಳಿಗೆ ಎರಡ್ಮೂರು ಅಪಘಾತವಾಗುತ್ತವೆ. ರಸ್ತೆಗೆ ಸ್ಪೀಡ್ ಬ್ರೇಕರ್ ಹಾಕುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದ ಗ್ರಾಮಸ್ಥರು ಒಂದು ಗಂಟೆಗಳ ಕಾಲ ರಸ್ತೆ ರಾಜ್ಯ ಹೆದ್ದಾರಿ ಬಂದ್ ಮಾಡಿದರು. ರಸ್ತೆಯಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.