ತಮಿಳು ನಟ ಕೆ ವಿಜಯನ್ ಸಾವನ್ನಪ್ಪಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ. ಜೂನ್ 12ರಂದೇ ವಿಜಯನ್ ನಿಧನ ಹೊಂದಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿಜಯನ್ ತಮಿಳಿನ ಹಲವು ಸಿನಿಮಾಗಳಲ್ಲಿ ಹಾಸ್ಯ ನಟನಾಗಿ, ಪೋಷಕ ನಟನಾಗಿ ನಟಿಸಿ ಖ್ಯಾತಿಗಳಿಸಿದ್ದರು.
Lakshmi Hebbalkar: ಮಳೆಯಿಂದ ಹಾನಿಗೊಳಗಾದವರಿಗೆ ಬೇಗ ಪರಿಹಾರ ಒದಗಿಸಬೇಕು: ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ
ಮೃತದೇಹ ಪತ್ತೆಯಾದಾಗ ತಲೆಗೆ ಪೆಟ್ಟು ಬಿದ್ದಿತ್ತು ಎನ್ನಲಾಗಿದ್ದು, ವಿಜಯನ್ ಮೃತದೇಹ ನೆಲದ ಮೇಲೆ ಬಿದ್ದಿತ್ತು ಎನ್ನಲಾಗುತ್ತಿದೆ. ಆದರೆ ಮನೆ ಒಳಗಿನಿಂದ ಬಂದ್ ಆಗಿತ್ತು. ವಿಜಯನ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆಯೇ ಅಥವಾ ಅವರ ಮೇಲೆ ಹಲ್ಲೆ ಆಗಿದೆಯೇ ಎಂಬ ಬಗ್ಗೆ ಖಾತ್ರಿ ಇಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ವಿಜಯನ್ ಅವರ ಗೆಳೆಯ ಅವರನ್ನು ಫೋನ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದಾಗ ವಿಜಯನ್ ಫೋನ್ ರಿಸೀವ್ ಮಾಡಿರಲಿಲ್ಲ. ಮನೆಯೂ ಸಹ ಒಳಗಿನಿಂದ ಬಂದ್ ಆಗಿತ್ತು. ಹಾಗಾಗಿ ಅವರು ನೀಲಂಕರಿ ಏರಿಯಾದ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.