ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 26 ಪೌರಕಾರ್ಮಿಕ ಹುದ್ದೆಗಳುಖಾಲಿ ಇದ್ದು ಆಸಕ್ತರು ಡಿಸೆಂಬರ್ 5, 2024ರ ಒಳಗೆ ಅರ್ಜಿ ಸಲ್ಲಿಸಬೇಕಾಗಿದೆ.
ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳುಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ವಿದ್ಯಾರ್ಹತೆಯ ಅವಶ್ಯಕತೆ ಇಲ್ಲ. ಆದರೆ ಕನ್ನಡ ಮಾತನಾಡಲು ಗೊತ್ತಿರಬೇಕು ಎಂಬುದು ಕಡ್ಡಾಯ.
ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಾಂಕ 07/08/2017 ರ ಪೂರ್ವದಲ್ಲಿ ನೇಮಕಾತಿ ಹೊಂದಿ ಪ್ರಸ್ತುತ ನೇರಪಾವತಿಯಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಜೊತೆಗೆ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯ ನಿರ್ವಹಿಸುತ್ತಿರಬೇಕು.
ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಚಿತ್ರದುರ್ಗದಲ್ಲಿ ಕೆಲಸ ಮಾಡಲು ಇಚ್ಚಿಸುವವರು ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದೆ. ಸಂಬಳ 27.000-47 675. ಆಸಕ್ತರು ಯೋಜನಾ ನಿರ್ದೇಶಕರು
ಜಿಲ್ಲಾ ನಗರಾಭಿವೃದ್ಧಿ ಕೋಶ
ಚಿತ್ರದುರ್ಗ
ಕರ್ನಾಟಕ
ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.