ತುಮಕೂರು: ಪೌರ ಕಾರ್ಮಿಕರೊಂದಿಗೆ ಮಹಾನಗರ ಪಾಲಿಕೆ ಆಯುಕ್ತೆ ಕಾಟೇರ ಸಿನಿಮಾ ವೀಕ್ಷಿಸಿದ್ದಾರೆ. ತುಮಕೂರು ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾರ ನಡೆಗೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ. ಪ್ರತಿದಿನ ನಗರದ ಸ್ವಚ್ಛತೆಗಾಗಿ ಶ್ರಮಿಸುವ ತುಮಕೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರು ಎಸ್ ಮಾಲ್ ಐನಾಕ್ಸ್ʼನಲ್ಲಿ ಪ್ರದರ್ಶನದಲ್ಲಿ ಕಾಟೇರ ಚಲನಚಿತ್ರ ವೀಕ್ಷಿಸಿದರು.
ಪಾಲಿಕೆ ಆಯುಕ್ತೆ ಬಿ ವಿ ಅಶ್ವಿಜ ಅವರು 196 ಪೌರ ಕಾರ್ಮಿಕರಿಗೆ ಉಚಿತವಾಗಿ ಕಾಟೇರ ಸಿನಿಮಾ ವೀಕ್ಷಿಸಲು ಅವಕಾಶ ಕಲ್ಪಿಸಿದ್ದರು. “ಕಳೆದ ಜನವರಿ 28ರಂದು ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿಯಿಂದ ತುಮಕೂರು ಎಂಬ ಕನ್ನಡ ಪದದ ಕಲಾಕೃತಿಯನ್ನು ರಚಿಸಿ ಗಿನ್ನೀಸ್ ದಾಖಲೆ ನಿರ್ಮಿಸುವಲ್ಲಿ ಪೌರಕಾರ್ಮಿಕರ ಪಾತ್ರ ಮರೆಯುವಂತಿಲ್ಲ” ಎಂದು ಪಾಲಿಕೆ ಆಯುಕ್ತೆ ಬಿ ವಿ ಅಶ್ವಿಜ ಹೇಳಿದರು.