ಬೆಂಗಳೂರು: ಹೊಸವರ್ಷದ ಆಚರಣೆಗೆ ಬೆಂಗಳೂರಿನಲ್ಲಿ ಬಿಗಿ ಬಂದೋಬಸ್ತ್ ಮಾಡುವ ಸಂಬಂಧ ಇಂದು ಕಮಿಷನರ್ ಕಮಲ್ ಪಂಥ್ ಸಭೆ ನಡೆಸಲಿದ್ದಾರೆ. ಪೊಲೀಸ್ ಆಯುಕ್ತರ ಕಛೇರಿಯಲ್ಲಿ ಸಭೆ ಜರುಗಲಿದ್ದು, ವೀಡಿಯೊ ಕಾನ್ಫರೆನ್ಸ್ ಮೂಲಕ ಕಮಿಷನರ್ ಮೀಟಿಂಗ್ ನಡೆಸಲಿದ್ದಾರೆ.
ನಗರದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಹೊಸವರ್ಷಕ್ಕೆ ಕಠಿಣ ರೂಲ್ಸ್ ಜಾರಿ ಮಾಡುವ ಸಂಬಂಧ ಚರ್ಚೆ ನಡೆಸಲಿದ್ದಾ ರೆ ಎಂದು ಹೇಳಲಾಗಿದೆ. ಇನ್ನೂ ಸಭೆಯಲ್ಲಿ ನಗರದ ಎಲ್ಲಾ ವಿಭಾಗದ ಡಿಸಿಪಿಗಳು, ಸಂಚಾರಿ ವಿಭಾಗದ ಅಧಿಕಾರಿಗಳು ಭಾಗಿಯಾಗಲಿ ದ್ದಾರೆ ಎಂದು ಹೇಳಲಾಗಿದೆ.

