ನಾಗಮಂಗಲ :– ನಾಗಮಂಗಲದಲ್ಲಿ 144 ಸೆಕ್ಷನ್ ಜಾರಿ ಆಗಿದ್ದು, ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ವಾಹನ ಸವಾರರೇ ಬೇಗ ಅಲರ್ಟ್ ಆಗಿ: ಈ ದಿನಾಂಕದೊಳಗೆ HSRP ಅಳವಡಿಸದಿದ್ರೆ ದಂಡ ಫಿಕ್ಸ್!
ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಸಂಭವಿಸಿದ ಹಿನ್ನೆಲೆಯಲ್ಲಿ ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್ ಜಾರಿ ಮಾಡಲಾಗಿದ್ದು ಇಂದು ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಮಂದಿಯನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ನಾಗಮಂಗಲ ಪಟ್ಟಣದ್ಯಾಂತ ಪೊಲೀಸರ ಸರ್ಪಗಾವಲು ಹಾಕಿದ್ದಾರೆ.
ಅನ್ಯಕೋಮಿನ ಯುವಕರ ಕೃತ್ಯ ಖಂಡಿಸಿ ಇಂದು ನಾಗಮಂಗಲ ಬಂದ್ಗೆ ವಿಶ್ವಹಿಂದೂ ಪರಿಷತ್, ಭಜರಂಗ ದಳ ಹಾಗೂ ಇತರೇ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.