ಬೆಂಗಳೂರು:– ಮಾಂಸ ಸಾಗಾಟಕ್ಕೆ ತಡೆ ಪ್ರಕರಣದಲ್ಲಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿಗೆ ಲಾಕಪ್ನಲ್ಲಿ ಬಟ್ಟೆ ಬಿಚ್ಚಿಸಿ, ಹಿಂಸೆ ನೀಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದು ಕಾರ್ಯಕರ್ತರು, ಬಸವೇಶ್ವರ ನಗರದ ಪೊಲೀಸ್ ಠಾಣೆ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
India vs Sri Lanka: ತಂಡ ಗೆದ್ದರೂ ಬೇಸರ ಹೊರ ಹಾಕಿದ ರಿಯಾನ್ ಪರಾಗ್ !
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿ, ಜಾಮೀನು ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿದ್ದಾರೆ ಎಂದು ಎಸಿಪಿ ಚಂದನ್ ವಿರುದ್ಧ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.
ಹೀಗಾಗಿ ಪ್ರತಿಭಟನೆ ನಿಯಂತ್ರಿಸಲು ಪುನೀತ್ ಕೆರೆಹಳ್ಳಿಯನ್ನು ಬಸವೇಶ್ವರನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಶಾಸಕ ಹರೀಶ್ ಪೂಂಜಾ ಮಾತನಾಡಿ, ನಾಯಿ ಮಾಂಸ ಮಾರಾಟ ದಂಧೆ ವಿಚಾರದಲ್ಲಿ ಗೃಹಮಂತ್ರಿಗಳು ಹೇಳಿದ್ದು ಸುಳ್ಳು , ಈ ಹಿಂದೆ ಪ್ರಿಯಾಂಕ್ ಖರ್ಗೆ ಕೂಡ ಸುಳ್ಳು ಹೇಳಿದ್ದರು. ಸಾಬೀತಾಗೋಕೆ ಮುಂಚೆಯೇ ಇವರೇ ದೃಢಪಡಿಸುತ್ತಾರೆ. ಇದು ಕಾಂಗ್ರೆಸ್ ಸರ್ಕಾರದ ವ್ಯವಸ್ಥಿತ ಸಂಚು. ನ್ಯಾಯ ಕೇಳೋಕೆ ಬಂದ ನಮ್ಮ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದರು
ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಗೂಂಡಾಗಳಂತೆ ಬಳಸಿಕೊಳ್ಳುತ್ತಿದೆ. ಪ್ರಕರಣ ಬೆಳಕಿಗೆ ತಂದವರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಮಾಂಸ ಯಾವುದು ಅನ್ನೋ ರಿಪೋರ್ಟ್ ಇನ್ನೂ ಬಂದಿಲ್ಲ, ಆಗಲೇ ಹೇಗೆ ನೀವು ಅದು ಮೇಕೆ ಮಾಂಸ ಎನ್ನುತ್ತೀರಿ? ಕಾಂಗ್ರೆಸ್ ಸರ್ಕಾರ ಹಿಂದುಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು