ತಿರುವನಂತಪುರಂ: ಕ್ರಿಕೆಟಿಗ (Cricket) ಶ್ರೀಶಾಂತ್ ವಿರುದ್ಧ 18.70 ಲಕ್ಷ ರೂ. ಪಡೆದು ವಂಚಿಸಿರುವ ಆರೋಪ (Cheating Case) ಕೇಳಿ ಬಂದಿದೆ. ಕೇರಳದ (Kerala) ವ್ಯಕ್ತಿಯೊಬ್ಬರಿಂದ ಶ್ರೀಶಾಂತ್ (S. Sreesanth) ಸೇರಿ ಇಬ್ಬರು ವ್ಯಕ್ತಿಗಳು ಹಣ ಪಡೆದು ವಂಚಿಸಿದ್ದಾರೆ ಎಂದು ದೂರು ದಾಖಲಾಗಿದೆ.
ವಂಚನೆ ಪ್ರಕರಣದ ಆರೋಪಿಗಳಾದ ಶ್ರೀಶಾಂತ್, ರಾಜೀವ್ ಕುಮಾರ್ ಮತ್ತು ವೆಂಕಟೇಶ್ ಕಿಣಿ ಎಂಬವರು ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಕ್ರೀಡಾ ಅಕಾಡೆಮಿಯನ್ನು ನಿರ್ಮಿಸುವುದಾಗಿ ಹೇಳಿ 2019 ರಿಂದ ವಿವಿಧ ದಿನಾಂಕಗಳಲ್ಲಿ ಹಣ ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 18.70 ಲಕ್ಷ ರೂ. ಹಣ ಪಡೆದಿದ್ದಾರೆ ಎಂದು ಚೂಂಡಾ ಮೂಲದ ದೂರುದಾರರ ಸರೀಶ್ ಗೋಪಾಲನ್ ಆರೋಪಿಸಿದ್ದಾರೆ. ಅಕಾಡೆಮಿಯಲ್ಲಿ ಪಾಲುದಾರರಾಗಲು ಅವಕಾಶ ನೀಡಿದ ನಂತರ ಹಣವನ್ನು ಹೂಡಿಕೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಶ್ರೀಶಾಂತ್ ಅವರನ್ನು ಮೂರನೇ ಆರೋಪಿ ಎಂದು ಉಲ್ಲೇಖಿಸಲಾಗಿದೆ.