ಬೆಂಗಳೂರು: ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ 1600ಕೋಟಿ ಮೌಲ್ಯದ ಸರ್ಕಾರಿ ಜಾಗ ಕಬಳಿಕೆ ಆರೋಪ ಕೇಳಿಬಂದಿದೆ. ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು ಕೂಡ ಶಾಮೀಲು ಆರೋಪ ಬಂದಿದ್ದು, ಈ ಬಗ್ಗೆ ಎನ್.ಆರ್.ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಕೆಂಗೇರಿಯ ಸರ್ವೇ ನಂಬರ್ 69 ರಲ್ಲಿ ಇರುವ 183 ಎಕರೆ ಜಾಗದ ಕುರಿತು ವಿವಾದಗಳು ಎದ್ದಿದ್ದು, 1973 ರಲ್ಲಿ 25 ಜನ ಜಮೀನುರಹಿತರಿಗೆ ಈ ಜಾಗ ಹಂಚಿಕೆಯಾಗಿತ್ತು. ಇದರಲ್ಲಿ SC/ST ಸಮುದಾಯದವರಿಗೆ ಪ್ರತಿ ವ್ಯಕ್ತಿಗೂ 1.20 ಎಕರೆ ಹಂಚಿಕೆಯಾಗಿತ್ತು. ಉತ್ತರಹಳ್ಳಿ-ಕೆಂಗೇರಿ ನಡು ಭಾಗದಲ್ಲಿ ಇರುವ ಈ ಜಾಗದಲ್ಲಿ ಹಲವು ಫಲಾನುಭವಿಗಳು ನಿಧನರಾದರು. ಇತ್ತ, ಸರ್ಕಾರದ ಅನುಮತಿಯಿಲ್ಲದೆ ಈ ಜಾಗವನ್ನು ಮಾರಾಟ ಮಾಡಿರುವ ಬಗ್ಗೆ ಹಲವು ಆರೋಪಗಳು ಕೇಳಿ ಬಂದಿವೆ.
Income Tax Returns Filing: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!
ಸುರೇಂದ್ರ ಎಂಬ ವ್ಯಕ್ತಿ ಮಾರಾಟಕ್ಕೆ ಸಂಚು ಹೂಡಿದ್ದರು ಎಂದು ಆರೋಪಿಸಲಾಗಿದೆ. ಸುರೇಂದ್ರ ಕೆಎಸ್ಎಸ್ ರೆಸಿಡೆನ್ಸಿ ಕಂಪನಿಯ ಮಾಲೀಕರಾಗಿದ್ದು, ಹೆಚ್ಸಿ ಬಾಲಕೃಷ್ಣ ಮತ್ತು ಕೆಲ ಪ್ರಭಾವಿಗಳ ಸಹಕಾರದಿಂದ ಮಾರಾಟಕ್ಕೆ ಮಾಡಿದ್ದಾರೆ ಎಂಬ ಆರೋಪಗಳಿವೆ. ಸರ್ಕಾರಿ ಬಂಡೆ ಜಾಗವನ್ನ ಅನುಮತಿಯಿಲ್ಲದೇ ಮಾರಾಟ ಆರೋಪವಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತಗೆ ದೂರು ನೀಡಲಾಗಿದೆ.