ಬೆಂಗಳೂರು:- ತಮ್ಮ ಬೆಂಗಳೂರಿನ ಜಮೀನನ್ನು ಭೂ ಮಾಫಿಯಾ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಒತ್ತುವರಿ ಮಾಡಿಕೊಂಡಿದ್ದಾರೆಂದು ಆರೋಪಿಸಿ ಲೋಕಾಯುಕ್ತಕ್ಕೆ ಬಾಲಿವುಡ್ ಖ್ಯಾತ ಗಾಯಕ ಹಾಗೂ ನಟ ಲಕ್ಕಿ ಅಲಿ ದೂರು ನೀಡಿದ್ದಾರೆ.
Kalaburgi: ಹೋಟೆಲ್ನಲ್ಲಿ ಸಿಲಿಂಡರ್ ಸ್ಫೋಟ..ಹಲವರಿಗೆ ಗಂಭೀರ ಗಾಯ..!
ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿರುವ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಭೂಮಿಯನ್ನು ರೋಹಣಿ, ಸಿಂಧೂರಿ ಹಾಗೂ ಮಧುಸೂಧನ್ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ದೂರಿನ ಪ್ರತಿಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಅಪ್ಲೋಡ್ ಮಾಡಿರುವ ಅವರು, ಅದರಲ್ಲಿ ಯಲಹಂಕ ನ್ಯೂ ಟೌನ್ ಠಾಣೆಯ ಎಸಿಪಿ ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿಯಾದ ಮನೋಹನ್ ಎಂಬುವರೂ ಸಹ ಹಗರಣದಲ್ಲಿ ಷಾಮೀಲಾಗಿದ್ದಾರೆಂದು ಅವರು ಆರೋಪಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ 2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ಆ ಕುರಿತಂತೆ ಸರಣಿ ಟ್ವೀಟ್ ಗಳನ್ನು ಮಾಡಿದ್ದ ಅವರು, ಆ ಟ್ವೀಟ್ ಗಳನ್ನು ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಿಗೆ ಟ್ಯಾಗ್ ಮಾಡಿದ್ದರು. ಆ ಟ್ವೀಟ್ ಗಳಲ್ಲಿ ಅವರು, ನ್ಯೂ ಯಲಹಂಕ ಟೌನ್ ಬಳಿಯಿರುವ ತಮ್ಮ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದು ಆ ಮೂಲಕ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.