ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದ ವಿಚಾರವಾಗಿ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ JDS ಮುಖಂಡರು ದೂರು ನೀಡಿದ್ದಾರೆ.
JDS ಕಚೇರಿ, ಕುಮಾರಸ್ವಾಮಿ ನಿವಾಸದ ಬಳಿ ಪೋಸ್ಟರ್ ಅಂಟಿಸಿದ್ದಾನೆ ಎಂದು ಎಸ್.ಮನೋಹರ್ ವಿರುದ್ಧ ಮಾಜಿ ಎಂಎಲ್ಸಿ ರಮೇಶ್ ಗೌಡ ವಾಗ್ದಾಳಿ ಮಾಡಿದ್ದಾರೆ.
BJP Tweet War: ʼಕಲೆಕ್ಷನ್ ಕೊಡಿ, ನಿಗಮ ಮಂಡಳಿ ಅಧಿಕಾರ ಪಡಿʼ: ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ವಾರ್
ಪೋಸ್ಟರ್ನಲ್ಲಿ ಏನಿದೆ?
ಕರೆಂಟ್ ಕಳ್ಳ ಖ್ಯಾತಿಯ ಹೆಚ್ಡಿಕೆ ನಿರ್ಮಾಣದ ಚಿತ್ರ “ಪೆನ್ ಡ್ರೈವ್ ಬ್ರದರ್”. ಪ್ರಾಮಾಣಿಕ ಕರೆಂಟ್ ಕಳ್ಳ ಖ್ಯಾತಿಯ ನಿರ್ದೇಶನ. ಬರೀ ಟೀಸರ್ಗೆ ಇಷ್ಟೊಂದು ಟೆನ್ಶನ್ ಆದರೆ ಹೇಗೆ ಸಿನಿಮಾ ಇನ್ನೂ ಬಾಕಿಯಿದೆ. ರಾಧಾ, ಮಾರ, ಬ್ಲೂ ಬಾಯ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆ. ಚಿತ್ರದ ನಿರ್ಮಾಣದ ವೆಚ್ಚ 68000 ಎಂದು ಪೋಸ್ಟರ್ನಲ್ಲಿ ವ್ಯಂಗ್ಯವಾಡಲಾಗಿದೆ.
ಹೆಚ್ಡಿ ಕುಮಾರಸ್ವಾಮಿಯವರ ಯಾವ ಹೇಳಿಕೆಗೆ ಆಕ್ರೋಶ?
ಇನ್ನು ಇತ್ತೀಚೆಗೆ ತಮ್ಮ ವಿರುದ್ಧ ನಡೆಯುತ್ತಿರುವ ಪೋಸ್ಟರ್ ಅಭಿಯಾನಕ್ಕೆ ಡಿ.ಕೆ. ಶಿವಕುಮಾರ್ ಅವರೇ ಕಾರಣ ಎಂದು ಹೆಚ್ಡಿ ಕುಮಾರಸ್ವಾಮಿಯವರು ಆರೋಪಿಸಿದ್ದರು. ಈ ವೇಳೆ “ನನ್ನ ವಿರುದ್ಧ ಪೋಸ್ಟರ್ ಅಭಿಯಾನ ಮಾಡುತ್ತಿರುವವರು ಹಿಂದೆ ಟೆಂಟ್ ಗಳಲ್ಲಿ ಬ್ಲೂ ಫಿಲಂ ಕನೆಕ್ಷನ್ ತೆಗೆದುಕೊಂಡು ಅಂಥ ಸಿನಿಮಾಗಳನ್ನು ಜನರಿಗೆ ತೋರಿಸಿಕೊಂಡು ಬಂದವರು. ಅಂಥವರಿಂದಲೇ ಇಂಥ ಪೋಸ್ಟರ್ ಅಭಿಯಾನ ನಡೆಯುತ್ತಿದೆ” ಎಂದು ಹೇಳಿದ್ದರು. ಇದರಿಂದ ಕೆರಳಿದ ಜನ ಮತ್ತೊಂದು ರೀತಿಯ ಪೋಸ್ಟರ್ ವೈರಲ್ ಮಾಡುತ್ತಿದ್ದಾರೆ. ಟೀಸರ್ಗೆ ಇಷ್ಟೊಂದು ಟೆನ್ಶನ್ ಆದರೆ ಹೇಗೆ ಸಿನಿಮಾ ಇನ್ನೂ ಬಾಕಿಯಿದೆ. ರಾಧಾ, ಮಾರ, ಬ್ಲೂ ಬಾಯ್ಸ್ ಚಿತ್ರಮಂದಿರಗಳಲ್ಲಿ ಬಿಡುಗಡೆ ಎನ್ನುವ ಪೋಸ್ಟರ್ ಅಂಟಿಸುತ್ತಿದ್ದಾರೆ.