ಗದಗ: ಲೋಕಾಯುಕ್ತ ಸಂಸ್ಥೆಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳು ಈಗಾಗಲೇ ನೋಂದಣಿಯಾಗಿವೆ. ಅವುಗಳಲ್ಲಿ 40 ಪ್ರಕರಣಗಳನ್ನು ಆಯ್ಕೆ ಮಾಡಿಕೊಂಡು ಅಂತಿಮ ತೀರ್ಮಾನ ಕೈಗೊಳ್ಳಲು ವಿಚಾರಣೆ ನಡೆಸಲಾಗಿ 22 ದೂರಿನ ಪ್ರಕರಣಗಳ ತೀರ್ಮಾನ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹೇಳಿದರು.
ನಮ್ಮ ಬಾಸ್ ತಪ್ಪು ಮಾಡಿಲ್ಲ ಬಿಟ್ಬಿಡಿ.. ಟವರ್ ಏರಿ ಕುಳಿತ ಅಭಿಮಾನಿ ಸೂಸೈಡ್ ಗೆ ಯತ್ನ..!
ಗದಗ ಜಿಲ್ಲಾಡಳಿತ ಭವನದಲ್ಲಿ ಸುದ್ದಿ ಗೋಷ್ಟಿಯನ್ನುದ್ದೇಶಿಸಿ ಮಾತನಾಡಿ 40 ಪ್ರಕರಣಗಳಲ್ಲಿ ಉಳಿದ ಪ್ರಕರಣಗಳನ್ನು ಶೀಘ್ರದಲ್ಲಿಯೇ ಹೆಚ್ಚಿನ ತನಿಖೆ ನಡೆಸಿ ಅಂತಿಮಗೊಳಿಸಲಾಗುವುದು ಎಂದರು.
ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು ಸಾರ್ವಜನಿಕರಿಂದ 113 ದೂರು ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಇವುಗಳಲ್ಲಿ ಕೆಲವು ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣಗಳು ಸೇರಿವೆ.
ಸಾರ್ವಜನಿಕರ ಹಲವಾರು ದೂರುಗಳನ್ನು ಸ್ವೀಕರಿಸಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಸಮಯಾವಕಾಶ ನಿಗದಿಪಡಿಸಿ ಇತ್ಯರ್ಥಪಡಿಸಿ ಲೋಕಾಯುಕ್ತ ಸಂಸ್ಥೆಗೆ ವರದಿ ನೀಡಲು ಸೂಚಿಸಲಾಗಿದೆ. ನಿಗದಿಪಡಿಸಿದ ಸಮಯಾವಕಾಶದೊಳಗೆ ಸಮಸ್ಯೆ ಇತ್ಯರ್ಥಪಡಿಸದೇ ಇದ್ದಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ಹೇಳಿದರು.