ಬೆಳಗಾವಿ: ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಡಾ. ಬಿ. ಆರ್. ಅಂಬೇಡ್ಕರ್ ಅವರ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಮತ್ತಷ್ಟು ಹೆಚ್ಚಿದೆ. ಇಂದು ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಅಮಿತ್ ಶಾ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಚರ್ಚೆಗೆ ಆಗ್ರಹಿಸಿದರು. ಸದನದಲ್ಲಿ ನಿರ್ಣಯ ಕೈಗೊಳಲು ಒತ್ತಾಯಿಸಿದರು. ಸದನದಲ್ಲಿ ಒಟ್ಟಾಗಿ ನಿಂತು ಅಂಬೇಡ್ಕರ್ ಫೊಟೋ ಹಿಡಿದು ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗಿದರು.
ಅಪ್ಪಿತಪ್ಪಿಯೂ ಈ ಆಹಾರಗಳ ಜೊತೆ ಬಾಳೆಹಣ್ಣು ತಿನ್ನಬೇಡಿ: ತಿಂದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್!
ಈ ಸಂದರ್ಭದಲ್ಲಿ ಬಿಜೆಪಿಯವರು ಕಾಂಗ್ರೆಸ್ನಿಂದಲೇ ಅಂಬೇಡ್ಕರ್ ಅವರಿಗೆ ಅನ್ಯಾಯವಾಗಿದೆ ಎಂದು ಹೇಳಿ ಪ್ರತಿಭಟಿಸಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪ್ರದರ್ಶಿಸಿದ ಅಂಬೇಡ್ಕರ್ ಭಾವಚಿತ್ರವನ್ನೇ ತೆಗೆದುಕೊಂಡು ಕಾಂಗ್ರೆಸ್ ವಿರುದ್ಧವೇ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ ಪ್ರದರ್ಶಿಸಿದರು. ಗದ್ದಲ, ಕೋಲಾಹಲ ಜೋರಾಗುತ್ತಿದ್ದಂತೆ ಸ್ಪೀಕರ್ ಹತ್ತು ನಿಮಿಷ ಕಲಾಪವನ್ನು ಮುಂದೂಡಿದರು.