ನವದೆಹಲಿ: ರಾಜ್ಯದ ಅಡಕೆ ಹಾಗೂ ತೆಂಗು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ, ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಅಡಕೆ ರೋಗಗಳು, ತೆಂಗಿಗೆ ಬೀಳುವ ಸಾಗಾಣಿಕೆ ವೆಚ್ಚ, ಮದ್ಯವರ್ತಿಗಳ ಹಾವಳಿಗೆ ಪರಿಹಾರ ಕೊಡುವಂತೆ ಸಚಿವರ ಗಮನ ಸೆಳೆದಿದ್ದಾರ.ೆ ಇದೇ ವೇಳೆ ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸುವ ಬಗ್ಗೆಯೂ ಸಚಿವರು ಮಾತನಾಡಿದ್ದಾರೆ.
ಹೌದು ಬೃಹತ್ ಕೈಗಾರಿಕೆ ಸಚಿವಾಲಯಕ್ಕೆ ಆಗಮಿಸಿದ ಚೌಹಾಣ್ ಅವರು ಕುಮಾರಸ್ವಾಮಿ ಅವರಿಗೆ ತಮ್ಮ ಪುತ್ರರಿಬ್ಬರ ವಿವಾಹಕ್ಕೆ ಆಮಂತ್ರಣ ನೀಡಿದರು. ಇದೇ ವೇಳೆ ಸಚಿವರಿಬ್ಬರು ಕರ್ನಾಟಕ ಸೇರಿದಂತೆ ರಾಷ್ಟ್ರದ ಕೃಷಿ ಕ್ಷೇತ್ರದ ಆಗುಹೋಗುಗಳು, ರೈತರ ಕುಂದುಕೊರತೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಅಡಿಕೆಗೆ ಬರುತ್ತಿರುವ ರೋಗಗಳ ಪರಿಹಾರಕ್ಕೆ 67 ಕೋಟಿ ರೂ. ಮುಂದಿನ ಬಜೆಟ್ನಲ್ಲಿ ಘೋಷಣೆ ಮಾಡಲಾಗುವುದು ಎಂದು ಚೌಹಾಣ್ ಅವರು ಘೋಷಣೆ ಮಾಡಿದ್ದು, ಆ ಬಗ್ಗೆ ಹೆಚ್ಡಿಕೆ ಕೃಷಿ ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಅಗತ್ಯ ಮಾರುಕಟ್ಟೆ ಸೌಲಭ್ಯದ ಕೊರತೆ ಹಾಗೂ ಬೆಳೆ ತೆಗೆಯುವ ಬಗ್ಗೆ ಸವಾಲು ಎದುರಿಸುವ ರೈತರಿಗೆ ಸಹಾಯ ಹಸ್ತ ಬೇಕಿದೆ. ಈ ನಿಟ್ಟಿನಲ್ಲಿ ತಾವು ನೀಡಿರುವ ಭರವಸೆ ರೈತರಲ್ಲಿ ಹರ್ಷ ಮೂಡಿಸಿದೆ ಎಂದು ಅವರು ಚೌಹಾಣ್ ಅವರಿಗೆ ತಿಳಿಸಿದ್ದಾರೆ.
Diabetes: ಸಕ್ಕರೆ ಕಾಯಿಲೆ ಕಂಟ್ರೋಲ್’ಗೆ ಬರಬೇಕಾ..? ಹಾಗಾದ್ರೆ ಊಟಕ್ಕೂ ಮೊದಲು ಇದನ್ನು ತಿನ್ನಿ ಸಾಕು.!
ಕರ್ನಾಟಕದ ತೆಂಗು ಬೆಳೆಗಾರರು ಎದುರಿಸುತ್ತಿರುವ ಕಠಿಣ ಸವಾಲುಗಳ ಬಗ್ಗೆ ಕೃಷಿ ಸಚಿವರ ಗಮನ ಸೆಳೆದು, ತೆಂಗು ಬೆಳೆಗಾರರ ಸಂಕಷ್ಟ ಪರಿಹಾರ ಮಾಡುವ ನಿಟ್ಟಿನಲ್ಲಿ ತಮ್ಮ ಕಡೆಯಿಂದ ದೊಡ್ಡ ಉಪಕ್ರಮ ಆಗಬೇಕಿದೆ. ಈ ನಿಟ್ಟಿನಲ್ಲಿ ತಾವು ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ ನಡೆಸಿ ಅವರ ಸಂಕಷ್ಟಗಳಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಸಮಾವೇಶ ನಡೆಸುವ ಹೆಚ್ಡಿಕೆ ಸಲಹೆಗೆ ತಕ್ಷಣವೇ ಸ್ಪಂದಿಸಿದ ಸಚಿವರು; ಇದು ಬಹಳ ಒಳ್ಳೆಯ ಆಲೋಚನೆ. ಬೆಳೆಗಾರರು ತಮ್ಮೆಲ್ಲ ಸಮಸ್ಯೆಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಿ. ಅನಂತರ ಪರಿಹಾರೋಪಾಯಗಳನ್ನು ಕಂಡುಕೊಳ್ಳೋಣ ಎಂದಿದ್ದಾರೆ.
ದುಬಾರಿ ಸಾಗಾಣಿಕೆ ವೆಚ್ಚವೇ ತೆಂಗು ಬೆಳೆಗಾರರಿಗೆ ದೊಡ್ಡ ಸಮಸ್ಯೆ ಆಗಿದೆ. ರೈತನ ಬಹುತೇಕ ಆದಾಯ ಸಾಗಾಣಿಕೆಗೆ ವ್ಯಯವಾಗುತ್ತಿದೆ. ಅವರಿಗೆ ನ್ಯಾಯಯುತ ಬೆಲೆ ಧಕ್ಕಿಸಿಕೊಡುವುದರ ಜೊತೆಗೆ ಸಾಗಾಣಿಕೆ ವ್ಯವಸ್ಥೆಯನ್ನು ರೈತರ ಕೈಗೆಟುಕುವಂತೆ ಮಾಡುವುದು ಅತ್ಯಗತ್ಯವಾಗಿದೆ. ಇದಕ್ಕೆ ಕೃಷಿ ಸಚಿವಾಲಯದ ನೆರವು ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ.