ಬೆಂಗಳೂರು: ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಇಂದು ರಾಜ್ಯಕ್ಕೆ ಆಗಮಿಸಿದ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು.
ಬೆಂಗಳೂರಿನಲ್ಲಿನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸಮಾರಂಭ ಆಯೋಜನೆ ಮಾಡಲಾಗಿತ್ತು. ಈ ವೇಳೆ ಪರಿಷತ್ ಸದಸ್ಯ ಟಿಎ ಶರವಣ ಅವರು ಭಾಗಿಯಾಗಿ ನಾಡಪ್ರಭು ಕೆಂಪೇಗೌಡ ಅವರ ಬೆಳ್ಳಿ ಪ್ರತಿಮೆ ನೀಡುವ ಮೂಲಕ ನೂತನ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಶುಭ ಕೋರಿದರು.
ಅಭಿನಂದನೆ ಸ್ವೀಕರಿಸಿದ ಕುಮಾರಸ್ವಾಮಿ, ಶುಭ ಕೋರಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಮುಂಬರುವ ಚುನಾವಣೆಗಳಿಗೆ ಈಗಿನಿಂದಲೇ ತಯಾರಿ ನಡೆಸುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸಾಕಷ್ಟು ಜೆಡಿಎಸ್ ಕಾರ್ಯಕರ್ತರು ಸೇರಿ ಸಾಕಷ್ಟು ಗಣ್ಯರು ಉಪಸ್ಥಿತರಿದ್ದರು.