ಮೈಸೂರು: ನಾನೂ ಸಹ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಗ ಅಧಿಕಾರಿಗಳು ಸಹಕಾರದಿಂದ ಯಶಸ್ವಿ ದಸರಾ ಮಾಡಿದ್ದೇವೆ. ಅದೇ ರೀತಿ ಈ ಬಾರಿಯ ದಸರಾ ಯಶಸ್ವಿಗೆ ಶ್ರಮಿಸಿದ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಅರ್ಪಿಸುತ್ತೇನೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ನಗರದ ಜೆ ಪಿ ಪ್ಯಾಲೇಸ್ ನಲ್ಲಿ ಆಯೋಜಿಸಿದ್ದ ಭೋಜನ ಕೂಟದಲ್ಲಿ ಅವರು ಮಾತನಾಡಿದರು .
ಎಲ್ಲಾ ಸಚಿವರು, ಶಾಸಕರು, ಮಾಜಿ ಶಾಸಕರು, ಎಲ್ಲಾ ಅಧಿಕಾರಿಗಳು ಸಹಕಾರದಿಂದ ದಸರಾ ಯಶಸ್ಸು ಆಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರ ಮಾರ್ಗದರ್ಶನದಂತೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ನಿರ್ವಹಿಸಿರುವುದರಿಂದ ಮೈಸೂರು ದಸರಾ ಯಶಸ್ಸು ಆಗಿದೆ ಎಂದರು. ಅಧಿಕಾರಿಗಳು ಅರ್ಪಣೆ ಮನೋಭಾವನೆಯಿಂದ ಹಾಗೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ. ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಹಾಗೂ ಟೀಕೆ ಟಿಪ್ಪಣಿ ಗಳು ಬಂದಿರುವುದಿಲ್ಲ.
ಕಾರಣ ದಸರಾ ಅಚ್ಚುಕಟ್ಟಾಗಿ ನಡೆದಿದೆ. ಈ ಸಂಬಂಧ ಅಧಿಕಾರಿಗಳಿಗೆ ಅಭಿನಂದನೆಗಳು ಹೇಳುತ್ತೇನೆ ಎಂದರು. ಮೈಸೂರು ಪ್ರಾಂತ್ಯದ ಕಲೆ ಸಾಹಿತ್ಯ ಶ್ರೀಮಂತಗೊಳಿಸಬೇಕು. ಅಧಿಕಾರಿಗಳು ಈ ಸಂಬಂಧ ಕೆಲಸ ಮಾಡಬೇಕು. ದಸರಾದಲ್ಲಿ ನಾಡ ಹಬ್ಬವಾಗಿ ಆಚರಿಸಲು ಹೆಚ್ಚು ಜನರು ದಸರಾದಲ್ಲಿ ಭಾಗವಹಿಸಬೇಕು ಹಾಗೂ ಅರ್ಧಪೂರ್ಣವಾಗಿ ದಸರಾ ಮಾಡಬೇಕು. ಜನ ಪರವಾಗಿ ಅಧಿಕಾರಿಗಳು ಇರಬೇಕು. ಜನ ಪರವಾದ ಕೆಲಸ ಮಾಡಬೇಕು ಎಂದು ತಿಳಿಸಿದರು.
ಔಷಧಿಗಳಿಲ್ಲದೆ ಆರೋಗ್ಯ ಚಿಕಿತ್ಸೆ: ಸುಪ್ರೀಂ ರೇ ಹೀಲಿಂಗ್ ಸೆಂಟರ್ : ಇಲ್ಲಿದೆ ಉಚಿತ ಸಲಹೆ – Reiki
ಮೈಸೂರು ಅಭಿವೃದ್ಧಿಗಾಗಿ ಯೋಜನೆ ಸಿದ್ಧಪಡಿಸಲಾಗುತ್ತಿದ್ದು ಇದಕ್ಕಾಗಿ ಅಧಿಕಾರಿಗಳು ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ಮುಂದಾಗಬೇಕು. ಸಮಾಜದಲ್ಲಿ ನಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಮುಂದಿನ ಮೈಸೂರು ದಸರಾವನ್ನು ಜನಪರ ಹಾಗೂ ಅರ್ಧಪೂರ್ಣವಾಗಿ ಆಚರಿಸಲು ಮುಂದಾಗೋಣ ಎಂದರು. ಬರವಿದೆ ಜನರಿಗೆ ಕುಡಿಯುವ ನೀರಿನ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಕ್ರಮವಹಿಸಬೇಕು. ಜಾನುವಾರುಗಳಿಗೆ ಮೇವು ತೊಂದರೆ ಆಗಬಾರದು. ಹಳ್ಳಿ ಗಳಿಗೆ ಅಧಿಕಾರಿಗಳು ಹೋಗಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.