ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಸಚಿವ ಎಚ್ ಕೆ ಪಾಟೀಲ್ ನೇತೃತ್ವದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದು, ಗದಗ ತಾಲೂಕಿನ ನಾಗಾವಿ ಗ್ರಾಮದಲ್ಲಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಕೋರಿದ್ದಾರೆ. ನಾಗಾವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿದ್ದು,
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನ ಜಾರಿಗೆ ತಂದಿದೆ, ಕಾಂಗ್ರೆಸ್ ಪಕ್ಷ ಬಡವರ ಪಕ್ಷ ಆಗಿದೆ. ಬಡವರ, ದೀನ ದಲಿತರ ಪರ ಕೆಲಸ ಮಾಡಲು ಸಿದ್ದನಿದ್ದೇನೆ ಎಂದು ನಿಮ್ಮ ಸೇವೆ ಮಾಡಲು ಅವಕಾಶ ಮಾಡಿ ಕೊಡಿ ಎಂದರು. ಮುಖಂಡರಾದ ವಾಸಣ್ಣ ಕುರಡಗಿ, ಸುಜಾತ ದೊಡ್ಡಮನಿ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ ಸೇರಿದಂತೆ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.